ಜ. 23ರಂದು ಪಿಂಚಣಿ ಅದಾಲತ್ ಹಾಗೂ ಜಿಪಿಎಫ್ ಅಹವಾಲು ಸ್ವೀಕಾರ: ನಿವೃತ್ತ ನೌಕರರ ಸಮಸ್ಯೆ ಪರಿಹಾರಕ್ಕೆ ವೇದಿಕೆ

Spread the love

ಧಾರವಾಡ: ಜಿಲ್ಲೆಯ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಹಾಲೇಖಪಾಲರ ಕಚೇರಿ ಹಾಗೂ ಜಿಲ್ಲಾ ಖಜಾನೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜನವರಿ 23, 2026 ರಂದು ಬೆಳಿಗ್ಗೆ 11 ಗಂಟೆಗೆ ‘ಪಿಂಚಣಿ ಅದಾಲತ್ ಮತ್ತು ಜಿ.ಪಿ.ಎಫ್ ಚಂದಾದಾರರ ಅಹವಾಲು ನಿವಾರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

​ಜಿಲ್ಲಾಧಿಕಾರಿಗಳ ಕಾರ್ಯಾಲಯದ ವಿ.ಸಿ ಸಭಾಂಗಣದಲ್ಲಿ ವೆಬೆಕ್ಸ್ (Webex) ತಂತ್ರಜ್ಞಾನದ ಮೂಲಕ ಈ ಸಭೆ ಜರುಗಲಿದೆ. ಪಿಂಚಣಿದಾರರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರು, ವೇತನ ಬಟವಾಡೆ ಅಧಿಕಾರಿಗಳು (DDO), ಪಿಂಚಣಿ ಮಂಜೂರಾತಿ ಪ್ರಾಧಿಕಾರಿಗಳು ಭಾಗವಹಿಸಲಿದ್ದಾರೆ.

​ಅಲ್ಲದೆ, ಪಿಂಚಣಿ ಪಾವತಿ ಮಾಡುವ ಪ್ರಮುಖ ಬ್ಯಾಂಕ್‌ಗಳಾದ ಎಸ್‌ಬಿಐ, ಯುಬಿಐ, ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಶಾಖಾ ವ್ಯವಸ್ಥಾಪಕರು ಸಹ ಸಭೆಯಲ್ಲಿ ಕಡ್ಡಾಯವಾಗಿ ಉಪಸ್ಥಿತರಿರುವಂತೆ ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *