
ಧರ್ಮಸ್ಥಳ :ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ವಿಶೇಷ ತನಿಖಾ ದಳ (ಎಸ್ಐಟಿ) ಇಂದು ‘ಮಾಸ್ಕ್ ಮ್ಯಾನ್’ ಎಂದು ಕರೆಸಿಕೊಂಡಿದ್ದ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂಬಾತನನ್ನು ಬಂಧಿಸಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಚಿನ್ನಯ್ಯ ಆರೋಪಿಸಿದ್ದ.
ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡವು ಆತನ ಹೇಳಿಕೆ ಆಧರಿಸಿ ತನಿಖೆ ನಡೆಸಿತ್ತು. ನಿನ್ನೆ ಬೆಳಗ್ಗೆ 10 ಗಂಟೆಯಿಂದ ಇಂದಿನ ಬೆಳಗ್ಗೆಯವರೆಗೆ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಸುದೀರ್ಘ ವಿಚಾರಣೆಯ ಬಳಿಕ ಆತನ ಆರೋಪಗಳು ಸುಳ್ಳು ಎಂದು ಸಾಬೀತಾದ ಹಿನ್ನೆಲೆಯಲ್ಲಿ ಎಸ್ಐಟಿ ಆತನನ್ನು ಬಂಧಿಸಿದೆ.
ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಚಿನ್ನಯ್ಯನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಆತನ ಹೇಳಿಕೆಯಿಂದಾಗಿ ತನಿಖಾ ಸಂಸ್ಥೆಗಳು ಸಾಕಷ್ಟು ಸಮಯ ಮತ್ತು ಸಂಪನ್ಮೂಲಗಳನ್ನು ವ್ಯಯಿಸಬೇಕಾಯಿತು. ಈ ಪ್ರಕರಣದಲ್ಲಿ ಇದೊಂದು ಮಹತ್ವದ ತಿರುವು ಎಂದು ಪರಿಗಣಿಸಲಾಗಿದೆ.

