ಭ್ರಷ್ಟಾಚಾರದ ಭ್ರಮಾಂಡ: ಶಾಸಕ ವೀರೇಂದ್ರ ಪಪ್ಪಿ ಬಂಧನ, 12 ಕೋಟಿ ನಗದು ಜಪ್ತಿ!

Spread the love

ಬೆಂಗಳೂರು: ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಅಘಾತಕಾರಿ ಬೆಳವಣಿಗೆಯಾಗಿದೆ. ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಸಿಕ್ಕಿಂ ರಾಜ್ಯದ ಗ್ಯಾಂಗ್ಟಕ್‌ನಲ್ಲಿ ಬಂಧಿಸಿದ್ದಾರೆ. ಶಾಸಕರ ಮನೆ ಮತ್ತು ಕಚೇರಿ ಸೇರಿದಂತೆ ಒಟ್ಟು 31 ಕಡೆಗಳಲ್ಲಿ ಶುಕ್ರವಾರ ಏಕಕಾಲಕ್ಕೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ಇದು ರಾಜಕಾರಣಿಗಳ ಬೇಜವಾಬ್ದಾರಿತನ ಮತ್ತು ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ.

ಆರೋಪಗಳ ಸುರಿಮಳೆ:
ಇಡಿ ಅಧಿಕಾರಿಗಳು ಗ್ಯಾಂಗ್ಟಕ್‌ನಲ್ಲಿ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ್ದು, ಅಲ್ಲಿಂದಲೇ ಟ್ರಾನ್ಸಿಟ್ ರಿಮ್ಯಾಂಡ್ ಪಡೆದು ಬೆಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾರೆ. ಬೆಂಗಳೂರು ಮತ್ತು ಚಿತ್ರದುರ್ಗದಲ್ಲಿರುವ ಪಪ್ಪಿ ಅವರ ಮನೆಗಳ ಮೇಲೆ ದಾಳಿ ನಡೆದಾಗ ಭ್ರಷ್ಟಾಚಾರದ ಕರಾಳ ಮುಖ ಬಯಲಾಗಿದೆ.
ಬಂಗಾರದ ಬೆಟ್ಟ, ಹಣದ ಹೊಳೆ:
ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ ಬರೋಬ್ಬರಿ 12 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದ್ದು, ಇದರಲ್ಲಿ 1 ಕೋಟಿ ರೂಪಾಯಿ ವಿದೇಶಿ ಕರೆನ್ಸಿ ಕೂಡ ಸೇರಿದೆ. ಇದರ ಜೊತೆಗೆ, ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಕೂಡ ಜಪ್ತಿ ಮಾಡಲಾಗಿದೆ ಎಂದು ಇಡಿ ಮೂಲಗಳು ಖಚಿತಪಡಿಸಿವೆ.

ವಾಹನ ಮತ್ತು ಬ್ಯಾಂಕ್ ಖಾತೆಗಳ ಜಪ್ತಿ:
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಇಡಿ ಅಧಿಕಾರಿಗಳು, ಶಾಸಕರಿಗೆ ಸೇರಿದ ನಾಲ್ಕು ಐಷಾರಾಮಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ, ಶಾಸಕ ವೀರೇಂದ್ರ ಪಪ್ಪಿ ಮತ್ತು ಅವರ ಸಹೋದರರಿಗೆ ಸೇರಿದ 17 ಬ್ಯಾಂಕ್ ಖಾತೆಗಳು ಮತ್ತು 2 ಬ್ಯಾಂಕ್ ಲಾಕರ್‌ಗಳನ್ನು ಕೂಡ ಜಪ್ತಿ ಮಾಡಲಾಗಿದೆ. ಈ ಘಟನೆಯು ರಾಜಕಾರಣದಲ್ಲಿ ಹಣಕಾಸಿನ ಅಕ್ರಮಗಳು ಯಾವ ಮಟ್ಟಕ್ಕೆ ತಲುಪಿವೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸರ್ಕಾರಗಳ ಬದ್ಧತೆಗೆ ಈ ಘಟನೆ ಸವಾಲನ್ನು ಎಸೆದಿದೆ.

Leave a Reply

Your email address will not be published. Required fields are marked *