​ರಾಣೇಬೆನ್ನೂರು: ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಜಾಗರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ

Spread the love

ರಾಣೇಬೆನ್ನೂರು: ನಗರದ ಯರೇಕುಪ್ಪಿ ರಸ್ತೆಯಲ್ಲಿರುವ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಕುರುಹಿನಶೆಟ್ಟಿ ಸೇವಾ ಸಮಾಜ ಸಂಘದ ವತಿಯಿಂದ ಫೆಬ್ರವರಿ 15ರಂದು ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಜಾಗರಣೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗುತ್ತಿದ್ದು, ಮುಂಜಾನೆ 6 ಗಂಟೆಯಿಂದಲೇ ಅಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಎಲೆ ಪೂಜೆ ಸೇರಿದಂತೆ ವಿವಿಧ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳು ನೆರವೇರಲಿವೆ.

​ಅಂದು ರಾತ್ರಿ 8 ಗಂಟೆಯಿಂದ ಶ್ರೀ ಸ್ವಾಮಿಯ ಶಿವರಾತ್ರಿ ಜಾಗರಣೆ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಫಲಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಾಜದ ಬಾಂಧವರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನ ಸಮಿತಿಯು ಪ್ರಕಟಣೆಯ ಮೂಲಕ ವಿನಂತಿಸಿದೆ.

Leave a Reply

Your email address will not be published. Required fields are marked *