
ಕುಂದಗೋಳ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ನಾಳೆ ಕುಂದಗೋಳ ತಾಲೂಕಿಗೆ ಭೇಟಿ ನೀಡಲಿದ್ದಾರೆ. ದಿನಾಂಕ 19.02.2026ರ ಗುರುವಾರದಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ.
ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಭೂ ದಾಖಲೆಗಳ ಸಮಸ್ಯೆ, ಪಡಿತರ ಚೀಟಿ, ಪಿಂಚಣಿ ಸೌಲಭ್ಯ ಸೇರಿದಂತೆ ಇಲಾಖಾವಾರು ದೂರುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಾಲೂಕು ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದು, ಸ್ಥಳದಲ್ಲೇ ಅಹವಾಲುಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

