ಧಾರವಾಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಾಧಿಕಾರಿಗಳ ನೇಮಕ: ಫೆ. 23 ರಂದು ನೇರ ಸಂದರ್ಶನ

Spread the love

ಧಾರವಾಡ: ಜಿಲ್ಲೆಯ ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ಉತ್ತಮ ಸೇವೆಯ ಹಿತದೃಷ್ಟಿಯಿಂದ, ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 07 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವೈದ್ಯಕೀಯ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಸದವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

​ಈ ನೇಮಕಾತಿಗಾಗಿ ಫೆಬ್ರವರಿ 23, 2026 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಧಾರವಾಡದ ಕೆ.ಸಿ. ಪಾರ್ಕ್ ಹತ್ತಿರವಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಮತ್ತು ಅರ್ಹ ವೈದ್ಯರು ತಮ್ಮ ಎಲ್ಲಾ ಅವಶ್ಯಕ ದೃಢೀಕೃತ ಮೂಲ ದಾಖಲಾತಿಗಳೊಂದಿಗೆ ಅಂದು ಖುದ್ದಾಗಿ ಸಂದರ್ಶನಕ್ಕೆ ಹಾಜರಾಗಬೇಕು. ಒಂದು ವೇಳೆ ನಿಗದಿತ ದಿನದಂದು ಅಗತ್ಯ ಸಂಖ್ಯೆಯ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ, ಎಲ್ಲಾ ಹುದ್ದೆಗಳು ಭರ್ತಿಯಾಗುವವರೆಗೆ ಪ್ರತಿ ಸೋಮವಾರ ನೇರ ಸಂದರ್ಶನ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *