
ನವಲಗುಂದ : ಪಟ್ಟಣದ ಇತಿಹಾಸ ಪ್ರಸಿದ್ಧ ಹಾಗೂ ಭಕ್ತರ ಆರಾಧ್ಯ ದೈವವಾಗಿರುವ ಶ್ರೀ ರಾಮಲಿಂಗೇಶ್ವರ ಕಾಮಣ್ಣನ ದೇವಸ್ಥಾನದಲ್ಲಿ ಕಳಸಾರೋಹಣ, ನೂತನ ಕಾರ್ಯಾಲಯ ಹಾಗೂ ಯಾತ್ರಿನಿವಾಸ ಉದ್ಘಾಟನೆ ಮತ್ತು ಭಕ್ತರ ಮನೆಗಳ ಹಸ್ತಾಂತರ ಕಾರ್ಯಕ್ರಮವು ಫೆ.26ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಮಲಿಂಗ ಓಣಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವು ಭಾವೈಕ್ಯತಾ ಮಹಾಸಂಸ್ಥಾನ ಪೀಠ, ಶಿರಹಟ್ಟಿಯ ಪೂಜ್ಯ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ.
ಪಂಚಗ್ರಹ ಹಿರೇಮಠ, ನವಲಗುಂದದ ಪೂಜ್ಯ ಶ್ರೀ ಷ.ಬ್ರ. ಶ್ರೀ ಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ. ಗವಿಮಠ, ನವಲಗುಂದದ ಪೂಜ್ಯ ಶ್ರೀ ಮ.ನಿ.ಪ್ರ. ಅಭಿನವ ಬಸವಲಿಂಗ ಸ್ವಾಮಿಗಳು, ದೇವಮಂದಿರ, ಮಣಕವಾಡದ ಪೂಜ್ಯ ಶ್ರೀ ಮ.ನಿ.ಪ್ರ. ಅಭಿನವ ಮೃತ್ಯುಂಜಯ ಸ್ವಾಮಿಗಳು, ಶ್ರೀ ಅಜಾತ ನಾಗಲಿಂಗ ಸ್ವಾಮಿ ಮಠದ ಪೂಜ್ಯ ಶ್ರೀ ವೀರಯ್ಯ ಸ್ವಾಮಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎಚ್. ಕೋನರಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಕೆ.ಎನ್. ಗಡ್ಡಿ ಹಾಗೂ ಯುವ ಮುಖಂಡರಾದ ವಿನೋದ ಅಸೂಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ವರದಿ : ಗಂಗಾಧರ ಕತ್ತಿ ನವಲಗುಂದ

