ಮಹಿಳಾ ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ವಿಶೇಷ ತರಬೇತಿ: ಅರ್ಜಿ ಆಹ್ವಾನ

Spread the love

ಧಾರವಾಡ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಸಿ.ಎಸ್.ಆರ್. (CSR) ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಪತ್ರಕರ್ತೆಯರಿಗಾಗಿ ವಿಶೇಷ ವಸತಿಯುತ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

​ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಾರ್ಚ್ 25 ರಿಂದ 27ರ ವರೆಗೆ ಮೂರು ದಿನಗಳ ಕಾಲ ಈ ತರಬೇತಿ ನಡೆಯಲಿದೆ. ಈ ಶಿಬಿರದಲ್ಲಿ ಪ್ರಮುಖವಾಗಿ ಡಿಜಿಟಲ್ ಮಾಧ್ಯಮದ ಸವಾಲುಗಳು, ಪತ್ರಿಕೋದ್ಯಮದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ, ಸಾಫ್ಟ್‌ಸ್ಕಿಲ್ ಅಭಿವೃದ್ಧಿ ಹಾಗೂ ನಾಯಕತ್ವ ಗುಣಗಳ ಕುರಿತು ಪರಿಣತರಿಂದ ತರಬೇತಿ ನೀಡಲಾಗುವುದು.

ಅರ್ಹತೆ ಮತ್ತು ಸಲ್ಲಿಕೆ ವಿಧಾನ:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಸಂಸ್ಥೆಗಳಲ್ಲಿ ಕನಿಷ್ಠ 5 ವರ್ಷಗಳ ಸೇವಾನುಭವ ಹೊಂದಿರುವ ಮಹಿಳಾ ಪತ್ರಕರ್ತೆಯರು ಈ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತರು ಮಾರ್ಚ್ 10, 2026ರ ಒಳಗಾಗಿ ಗೂಗಲ್ ಫಾರ್ಮ್ (https://forms.gle/tozr4GxUQibDHBvk9) ಮೂಲಕ ತಮ್ಮ ಮಾಹಿತಿಯನ್ನು ಸಲ್ಲಿಸಬೇಕು.

ಅಗತ್ಯ ದಾಖಲೆಗಳು:

ಅರ್ಜಿಯೊಂದಿಗೆ ಅಭ್ಯರ್ಥಿಯ ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ ಅಥವಾ ಕಚೇರಿಯ ಅಧಿಕೃತ ಗುರುತಿನ ಚೀಟಿ, ಸಂಸ್ಥೆಯು ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಕುರಿತ ದಾಖಲೆ ಹಾಗೂ 5 ವರ್ಷಗಳ ಸೇವಾನುಭವದ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.

​ಇದು ವಸತಿಯುತ ತರಬೇತಿಯಾಗಿದ್ದು, ಆಯ್ಕೆಯಾದ ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಮಾಧ್ಯಮ ಅಕಾಡೆಮಿಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *