ಪದುಚೇರಿ ವಿಧಾನಸಭೆ ಚುನಾವಣೆ: ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ ಮಹತ್ವದ ಸಭೆ

Spread the love

ನವದೆಹಲಿ: ಮುಂಬರುವ ಪದುಚೇರಿ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಭರ್ಜರಿ ಸಿದ್ಧತೆ ಆರಂಭಿಸಿದೆ. ಬುಧವಾರದಂದು ನವದೆಹಲಿಯ ಇಂದಿರಾ ಭವನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪದುಚೇರಿ ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ಪ್ರಮುಖ ಸಭೆ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಮುಂಬರುವ ಚುನಾವಣಾ ಕಾರ್ಯತಂತ್ರ ಹಾಗೂ ಪಕ್ಷದ ಸಂಘಟನೆಯ ಕುರಿತು ಚರ್ಚೆ ನಡೆಸಿದರು.

​ಸಭೆಯ ಬಳಿಕ ಮಾಹಿತಿ ನೀಡಿದ ರಾಹುಲ್ ಗಾಂಧಿ ಅವರು, ಪದುಚೇರಿ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಮಾರ್ಗಸೂಚಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಜೊತೆಗೆ, ಪದುಚೇರಿ ಜನರ ಧ್ವನಿ, ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವಂತಹ ಯೋಜನೆಯನ್ನು ರೂಪಿಸುವತ್ತ ಸಭೆಯಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ. ಜನರ ಆಶೋತ್ತರಗಳಿಗೆ ಪೂರಕವಾಗಿ ಮುನ್ನಡೆಯುವ ಮೂಲಕ ಚುನಾವಣೆಯಲ್ಲಿ ಜಯ ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಂಖಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *