
ಕುಂದಗೋಳ: ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ (ಸ್ಲಂ ಬೋರ್ಡ್) ವತಿಯಿಂದ ಜನವರಿ 24ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಕುಂದಗೋಳ ತಾಲೂಕಿನಿಂದ ಸುಮಾರು 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಶಿವಾನಂದ ಬೆಂತೂರ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಸ್ಲಂ ಬೋರ್ಡ್ ಅಧ್ಯಕ್ಷರೂ ಆಗಿರುವ ಶಾಸಕ ಪ್ರಸಾದ್ ಅಬ್ಬಯ್ಯ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಬಡವರಿಗಾಗಿ 42 ಸಾವಿರಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರವೊಂದರಲ್ಲೇ 1008 ಮನೆಗಳನ್ನು ನಿರ್ಮಿಸಲಾಗಿದ್ದು, ಇವುಗಳ ಹಂಚಿಕೆ ಕಾರ್ಯಕ್ರಮವನ್ನು ಇದೇ 24ರಂದು ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಮಹತ್ವದ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೂಡ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಕುಂದಗೋಳ ತಾಲೂಕಿನಿಂದ ಅಂದಾಜು 10 ಸಾವಿರಕ್ಕೂ ಹೆಚ್ಚು ಜನರನ್ನು ಕರೆದೊಯ್ಯುವ ಗುರಿ ಹೊಂದಲಾಗಿದ್ದು, ಇದರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ತೆರಳಲು ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು ಹಾಗೂ ಈ ಕಾರ್ಯಕ್ರಮಕ್ಕೆ ಪಕ್ಷದ ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಮಾಜಿ ಶಾಸಕ ಎಮ್ ಎಸ್ ಅಕ್ಕಿ, ಮುಂಖಡರಾದ ಚಂದ್ರಶೇಖರ ಜುಟ್ಟಲ್, ಸುರೇಶ ಸವಣೂರ, ರಮೇಶ ಕೊಪ್ಪದ, ದೃತಿ ಸಾಲ್ಮನಿಯವರು ಹೀಗೆ ಕಾಂಗ್ರೆಸ್ ಪಕ್ಷದ ಮುಂಖಡರು ತಮಗೆ ನೀಡಿರುವ ಜವಾಬ್ದಾರಿ ನಿಬಾಯಿಸಿದ್ದು. ಆದ್ದರಿಂದ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಗದೀಶ್ ಉಪ್ಪಿನ್ ರಮೇಶ್ ಕೊಪ್ಪದ್, ಸುರೇಶ್ ಸವನೂರು, ರುದ್ರಪ್ಪ ಗಾಣಿಗೇರ, ಮಲ್ಲಿಕಾರ್ಜುನ ಕೀರೆಸೂರ, ಲಕ್ಷ್ಮಣ್ ಚುಳಕಿ, ಖಯಿಮ ನಾಲಬಂದ, ನಿಂಗಪ್ಪ ಹಳ್ಳಿಕೇರಿ, ಬೀರಪ್ಪ ಕುರುಬರ, ಗಂಗಾಧರ್ ಗುಡೇಮ್ಮನವರ, ಶಂಭು ನಂದೆಪ್ಪನವರ, ಇನ್ನೂ ಅನೇಕ ಮುಖಂಡರು ಪಾಲ್ಗೊಂಡಿದ್ದರು.

