ಧಾರವಾಡ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನ

Spread the love

ಧಾರವಾಡ: ಕರ್ನಾಟಕ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಘಟಕ ಕಾಲೇಜುಗಳಿಗೆ 2025-26ನೇ ಸಾಲಿನ ಸ್ನಾತಕ ಕೋರ್ಸ್‌ಗಳಿಗಾಗಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇತಿಹಾಸ ಮತ್ತು ಭೌತಶಾಸ್ತ್ರ ವಿಷಯಗಳಿಗೆ ಅಗತ್ಯತೆಗನುಗುಣವಾಗಿ ಪೂರ್ಣಾವಧಿ ಹಾಗೂ ಅಲ್ಪಾವಧಿ ಆಧಾರದ ಮೇಲೆ ಬೋಧನೆ ಮಾಡಲು ಈ ನೇಮಕಾತಿ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 4, 2025ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಆಯಾ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಅಥವಾ ಕರ್ನಾಟಕ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.kud.ac.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *