
ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಧಾರವಾಡ ಜಿಲ್ಲೆಯ ಆರು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ 42 ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ನಗರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕುಗಳ ವಿವಿಧ ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಲ್ಲಿ ಈ ಹುದ್ದೆಗಳು ಭರ್ತಿಯಾಗಲಿವೆ. ಕುಂದಗೋಳ ತಾಲೂಕಿನ ಕಳಸ, ಕುಂದಗೋಳ, ಹಿರೇನರ್ತಿ, ಕಮಡೊಳ್ಳಿ, ಸಂಶಿ ಹಾಗೂ ಯಲಿವಾಳ ಸೇರಿದಂತೆ ವಿವಿಧ ಕೇಂದ್ರಗಳು ಈ ನೇಮಕಾತಿಯ ವ್ಯಾಪ್ತಿಗೆ ಒಳಪಟ್ಟಿವೆ.
ಮಂಜೂರಾಗಿರುವ ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಗೌರವಧನ ಆಧಾರಿತ ಸೇವೆಯಡಿ ನೇಮಕಾತಿ ನಡೆಯಲಿದ್ದು, ಆಸಕ್ತ ಹಾಗೂ ಅರ್ಹ ಮಹಿಳಾ ಅಭ್ಯರ್ಥಿಗಳು ಜುಲೈ 16, 2026ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

