ಧಾರವಾಡ: ರಾಜ್ಯಾದ್ಯಂತ ಮತ್ತು ಹೊರರಾಜ್ಯಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸಲು ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಧನಸಹಾಯ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅಲ್ಲದೆ, ಸ್ಥಳೀಯ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ, ಮತ್ತು ಚಿತ್ರಕಲೆ, ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡುವ ಉದ್ದೇಶದಿಂದಲೂ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಈ ಎಲ್ಲ ಸಹಾಯಧನ ಯೋಜನೆಗಳಿಗೆ 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅರ್ಹ ಸಂಸ್ಥೆಗಳು ಮತ್ತು ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸೇವಾಸಿಂಧು (sevasindhu.karnataka.gov.in) ಪೋರ್ಟಲ್ ಮೂಲಕವೇ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 30, 2025 ಕೊನೆಯ ದಿನಾಂಕವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಸರ್ಕಾರವು ಹೊರಡಿಸಿರುವ ಆದೇಶ ಸಂಖ್ಯೆ ಕಸಂವಾ 280 ಕಸಧ 2024 (ಭಾ-1) ದಿನಾಂಕ: 31.10.2025 ರಲ್ಲಿನ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಮತ್ತು ಇಲಾಖೆಯ ವೆಬ್‌ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ.
ಹೆಚ್ಚಿನ ಮಾಹಿತಿ ಮತ್ತು ವಿವರಣೆಗಾಗಿ ಇಲಾಖೆಯು ನೀಡಿರುವ ದೂರವಾಣಿ ಸಂಖ್ಯೆಗಳಾದ 08024410547, 8792662814, 8792662816, 08022213530, 9986837037, 9900337738, 9448436877, 9480197511, 9916600027, ಅಥವಾ 08022241325 ಗೆ ಸಂಪರ್ಕಿಸಬಹುದಾಗಿದೆ.

