ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ನೇಮಕಾತಿ; ಡಿ. 12 ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಧಾರವಾಡ: ನವೆಂಬರ್ 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹುಬ್ಬಳ್ಳಿ-ಧಾರವಾಡ (ಶಹರ) ದಲ್ಲಿ ತೆರವಾದ ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈ ಹುದ್ದೆಯು ಹಿಂದಿನವರ ರಾಜೀನಾಮೆಯಿಂದ ತೆರವಾಗಿದ್ದು, ಗುತ್ತಿಗೆ ಆಧಾರದಲ್ಲಿ ನಿರ್ವಹಿಸಲ್ಪಡಲಿದೆ.
ಸ್ಥಳೀಯ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 12, 2025 ರ ಸಂಜೆ 5:30 ರೊಳಗಾಗಿ ಕಚೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಸಕ್ತರು ದೂರವಾಣಿ ಸಂಖ್ಯೆ 0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

