ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

Spread the love


ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಧಾರವಾಡ:ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಇಲಾಖೆ 2025–26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಗಳನ್ನು ಆಯೋಜಿಸಿದೆ.

ಈ ಹಿನ್ನೆಲೆಯಲ್ಲಿ 2025–26 ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಮತ್ತು ರೈತ ಮಹಿಳೆಯರು ತಮ್ಮ ಎಫ್‌ಐಡಿ (Farmer ID) ಬಳಸಿ ಕೃಷಿ ಇಲಾಖೆಯ ಕೆ–ಕಿಸಾನ್ ಪೋರ್ಟಲ್ (K-Kisan Portal) ನಲ್ಲಿ “ಸಿಟಿಜನ್ ಲಾಗಿನ್” ಅಥವಾ “ಆರ್‌ಎಸ್‌ಕೆ ಲಾಗಿನ್” ಮೂಲಕ, ಹತ್ತಿರದ ರೈತ ಸಂಪರ್ಕ ಕೇಂದ್ರ (RSK), ಸೇವಾ ಕೇಂದ್ರ ಅಥವಾ ಸ್ವತಃ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳನ್ನು ಪೋರ್ಟಲ್‌ಗೆ ಅಪ್‌ಲೋಡ್ ಮಾಡುವುದು ಕಡ್ಡಾಯ.

ಆಸಕ್ತ ರೈತರು ನವೆಂಬರ್ 29, 2025ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಬೆಳೆ ಕಟಾವು ವಿಧಾನ, ಸ್ಪರ್ಧಾತ್ಮಕ ಇಳುವರಿ ಮಾಹಿತಿ ಮುಂತಾದ ವಿವರಗಳಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಇಲಾಖೆ ಸೂಚಿಸಿದೆ.

ಈ ವರ್ಷದ ರಾಜ್ಯ ಮಟ್ಟದ ಬೆಳೆ ಸ್ಪರ್ಧೆಗೆ ಜೋಳ (ಮಳೆ ಆಶ್ರಿತ) ಮತ್ತು ಕಡಲೆ (ಮಳೆ ಆಶ್ರಿತ) ಬೆಳೆಗಳನ್ನು ನಿಗದಿಪಡಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಗೆ ಕಡಲೆ (ಮಳೆ ಆಶ್ರಿತ) ಹಾಗೂ ತಾಲ್ಲೂಕು ಮಟ್ಟದ ಸ್ಪರ್ಧೆಗೆ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿನಗರ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲ್ಲೂಕುಗಳಿಗೆ ಕಡಲೆ (ಮಳೆ ಆಶ್ರಿತ), ಮತ್ತು ಕಲಘಟಗಿ ತಾಲೂಕಿಗೆ ಜೋಳ (ಮಳೆ ಆಶ್ರಿತ) ಬೆಳೆ ಆಯ್ಕೆಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply

Your email address will not be published. Required fields are marked *