ರಾಣೇಬೆನ್ನೂರು ವೈದ್ಯರ ಮೇಲಿನ ಹಲ್ಲೆ ಪ್ರಕರಣ: ದೂರು-ಪ್ರತಿ ದೂರು ದಾಖಲು, ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

Spread the love

ರಾಣೇಬೆನ್ನೂರು: ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ನಗರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ನಗರದ ಕೋಟೆ ಓಣಿಯಲ್ಲಿರುವ ಕ್ಲಿನಿಕ್‌ಗೆ ನುಗ್ಗಿದ 20-30 ಜನರ ಗುಂಪು ವೈದ್ಯರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ನಗರದ ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಈ ದಾಳಿ ನಡೆದಿದೆ. ಘಟನೆ ವೇಳೆ ಡಾ. ಗುರುಮೂರ್ತಯ್ಯ ಅವರ ಕ್ಲಿನಿಕ್ ಎದುರು ನಿಲ್ಲಿಸಿದ್ದ ಬೈಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ವೈದ್ಯರನ್ನು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಘಟನೆಯ ನಂತರ ಕೋಟೆ ಓಣಿ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ. ಈ ಸಂಬಂಧ ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿದೆ.

ಸೈಯದ್ ಅಹಮದ್ ಮುಕಾಮ್ಹಾರ್, ಸೈಯದ್ ಹೊನ್ನಾಳಿ, ಜಾಫರ್ ಕಿಲ್ಲೆದಾರ, ಅಬ್ದುಲ್ ಮುನಾಫ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತೆಯನ್ನು ನಿಯೋಜಿಸಲಾಗಿದೆ.

Leave a Reply

Your email address will not be published. Required fields are marked *