

ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು ಮಂಗಳವಾರದಂದು ಬೆಳಗಾವಿ ಸಮೀಪದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಈ ಸಮಯದಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯ ಕುರಿತು ಚರ್ಚಿಸಿದರು.
ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಅವುಗಳನ್ನು ತ್ವರಿತವಾಗಿ ಮತ್ತು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಗತ್ಯ ಸೂಚನೆಗಳನ್ನು ನೀಡಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಈ ಪರಿಶೀಲನೆಯು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗೆ ವೇಗ ಸಿಕ್ಕಂತಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಶ್ರೀ ರಾಹುಲ್ ಜಾರಕಿಹೊಳಿ ಮತ್ತು ಲೋಕೋಪಯೋಗಿ ಇಲಾಖೆಯ (PWD) ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

