ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು!

Spread the love

ಕೊಳ್ಳೇಗಾಲ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕೊಳ್ಳೇಗಾಲದಲ್ಲಿ ನಡೆದಿದೆ.

ಕೊಳ್ಳೇಗಾಲದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಮೃತ ವ್ಯಕ್ತಿಯನ್ನು ಚಿಕ್ಕಲೂರು ಮೇನ್‌ರೋಡ್‌ನ ಕೆ.ಎಸ್. ದೊಡ್ಡಿ ಗ್ರಾಮದ ನಿವಾಸಿ ಸುಬ್ರಹ್ಮಣ್ಯ ಅವರ ಪುತ್ರ ರಾಮಸ್ವಾಮಿ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *