ಶುಕ್ರವಾರ, 27 Nov 2026 | ಕರ್ನಾಟಕ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಶುಕ್ರವಾರ, 27 Nov 2026 ವಿಶ್ವಾಸಾರ್ಹ ಕನ್ನಡ & ರಾಷ್ಟ್ರೀಯ ಸುದ್ದಿ ಜಾಲ
Karnataka

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ
  • Spread the loveಹನೂರು: ದಿನ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕದ…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

ಹನೂರು: ದಿನ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕದ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿರುವ ಬೆಲೆ ಏರಿಕೆ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದೆ. ಸರ್ಕಾರ ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸಂಘಟನಾ ಉಸ್ತುವಾರಿ ಜನಧ್ವನಿ ವೆಂಕಟೇಶ್ ನೇತೃತ್ವದಲ್ಲಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ದಿ. ಹೆಚ್. ನಾಗಪ್ಪ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಖಾಲಿ ಬಿಂದಿಗೆ ಮತ್ತು ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘಟನಾ ಉಸ್ತುವಾರಿ ಹನೂರು ವೆಂಕಟೇಶ್, “ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ ಎನ್ನಲಾಗುತ್ತಿದೆ. ಆದರೆ ಮುಖ್ಯಮಂತ್ರಿಗಳ ನಿವಾಸ ನವೀಕರಣಕ್ಕೆ 100 ಕೋಟಿ ರೂ., ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಹಾಗೂ ಹೊಸ ಕಾರುಗಳ ಖರೀದಿಗೆ ಸಾವಿರಾರು ಕೋಟಿ ರೂ. ಖರ್ಚು ಮಾಡಲು ಸರ್ಕಾರದ ಬಳಿ ಹಣವಿದೆ. ಆದರೆ ಆಶಾ ಕಾರ್ಯಕರ್ತೆಯರು, ರೈತರು, ಮಕ್ಕಳ ಬಿಸಿಯೂಟ ಹಾಗೂ ಅಂಗವಿಕಲರಿಗೆ ನೀಡಲು ಹಣವಿಲ್ಲದಂತಾಗಿದೆ,” ಎಂದು ಹೇಳಿದರು.

“ಬಿಸಿಲು, ಮಳೆ ಎನ್ನದೆ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸದೆ ಸರ್ಕಾರದ ಪ್ರತಿನಿಧಿಗಳು ವಿದೇಶ ಪ್ರವಾಸದಲ್ಲಿದ್ದಾರೆ. ಇವಿಎಂ ಮತ್ತು ಬ್ಯಾಲೆಟ್ ಪೇಪರ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ 2028ರ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ,” ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ನಿರಂಜನ್ ಕುಮಾರ್ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾಲ್ಕು ಬಾರಿ ಹಾಲಿನ ದರ ಏರಿಸಿ ಜನಸಾಮಾನ್ಯರಿಗೆ ಹೊರೆಯಾಗಿದೆ. ಹಾಲು, ಬೆಣ್ಣೆ, ತುಪ್ಪ ಹಾಗೂ ಮೊಸರಿನ ದರ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕೂಲಿ ಕಾರ್ಮಿಕರು ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ,” ಎಂದು ದೂರಿದರು.

“ವೃದ್ಧಾಪ್ಯ, ವಿಧವಾ ಹಾಗೂ ವಿಕಲಚೇತನರ ಮಾಸಾಶನ ಹಲವು ತಿಂಗಳಿನಿಂದ ಫಲಾನುಭವಿಗಳಿಗೆ ತಲುಪಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆಯಾದರೂ ಜಾನುವಾರುಗಳಿಗೆ ಮೇವು, ಗೋಶಾಲೆ ಹಾಗೂ ರೈತರಿಗೆ ಬಿತ್ತನೆ ಬೀಜ ಒದಗಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ ಹಾಗೂ ವಾಲ್ಮೀಕಿ ನಿಗಮದ ಅವ್ಯವಹಾರದ ಹಣವನ್ನು ಇದುವರೆಗೂ ವಾಪಸ್ ಪಡೆಯಲಾಗಿಲ್ಲ,” ಎಂದು ಅವರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ನಟರಾಜೇಗೌಡ, ರೇವಣ್ಣ, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕ ಬಾಲಸುಬ್ರಮಣ್ಯಂ, ಹನೂರು ಮಂಡಲ ಅಧ್ಯಕ್ಷ ವೃಷಭೇಂದ್ರ ಸ್ವಾಮಿ, ಮಹದೇಶ್ವರ ಬೆಟ್ಟ ಮಂಡಲ ಅಧ್ಯಕ್ಷ ಮುರುಗೇಶ್, ಬಿ.ಎಲ್.ಎ-1 ಲೋಕೇಶ್ ಜೆಟ್ಟಿ, ಮಾಜಿ ಅಧ್ಯಕ್ಷ ಜಗನ್ನಾಥ ನಾಯ್ಡು, ಪ್ರಧಾನ ಕಾರ್ಯದರ್ಶಿಗಳಾದ ವರಪ್ರಸಾದ್, ವಿಜಯೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

ADVERTISEMENT