ಧಾರವಾಡ:ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ: ನ. 06 ಕೊನೆಯ ದಿನ

Spread the love

ಧಾರವಾಡ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುವಂತೆ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ೨೦೨೫–೨೬ ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ನವೆಂಬರ್ 06,2025 ರೊಳಗಾಗಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಶೇಷ ಡಿಇಡಿ (D.Ed) ಅಥವಾ ಬಿಇಡಿ (B.Ed) ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.

ನೇರಗುತ್ತಿಗೆ ಆಧಾರದ ಮೇಲೆ ಆಯ್ಕೆಯಾದ ಈ ಸಮನ್ವಯ ಶಿಕ್ಷಕರು ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬಹುದಾಗಿದೆ. ಹುದ್ದೆಗಳ ನೇಮಕಾತಿ ಮತ್ತು ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಧಾರವಾಡ ಕಚೇರಿಯ ಅಧೀಕ್ಷಕರನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *