ಚಿಕ್ಕಮಗಳೂರು: ಜೀಪ್ ಚಾಲಕ ಆತ್ಮಹತ್ಯೆ ಪ್ರಕರಣ; ಪೊಲೀಸರಿಂದ ಕಾನ್ಸ್ಟೇಬಲ್ ಬಂಧನ
ಚಿಕ್ಕಮಗಳೂರು: ಕಳಸ ತಾಲ್ಲೂಕಿನ ಬಸ್ತಿಗದ್ದೆ ಗ್ರಾಮದ ಜೀಪ್ ಚಾಲಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಿರುಕುಳ ನೀಡಿದ ಆರೋಪದ ಮೇಲೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸಿದ್ದೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ:ಕಳೆದ ಜುಲೈ 17ರಂದು ಜೀಪ್ ಚಾಲಕ ನಾಗೇಶ್ ತನ್ನ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ, ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ರಸ್ತೆಯ ಮಧ್ಯದಲ್ಲಿ ಸ್ನೇಹಿತರೊಂದಿಗೆ ಮದ್ಯಪಾನ ಮಾಡುತ್ತಿದ್ದರು. ರಸ್ತೆಯನ್ನು ಬಿಟ್ಟು ಪಕ್ಕಕ್ಕೆ ನಿಲ್ಲುವಂತೆ ನಾಗೇಶ್ ಸೂಚಿಸಿದಾಗ, ಕೋಪಗೊಂಡ ಸಿದ್ದೇಶ್ ನಾಗೇಶ್ ಮೇಲೆ ಹಲ್ಲೆ ನಡೆಸಿದ್ದಾರೆ…

