ದೆಹಲಿಯ ಖ್ಯಾತ ಸ್ವಾಮಿ ಚೈತನ್ಯಾನಂದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಸಂಗತಿ ಬಯಲು, 17 ವಿದ್ಯಾರ್ಥಿನಿಯರಿಂದ ಎಫ್‌ಐಆರ್ ದಾಖಲು
ನವದೆಹಲಿ: “ದೆಹಲಿ ಬಾಬಾ” ಎಂದೇ ಪ್ರಸಿದ್ಧರಾಗಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯ ಆರೋಪ ಹೊರಬಿದ್ದಿದೆ. ಈ ಬೆನ್ನಲ್ಲೇ ಸ್ವಾಮೀಜಿಯ ಅಶ್ಲೀಲ ವಾಟ್ಸಾಪ್ ಸಂದೇಶಗಳು ಬಹಿರಂಗಗೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ. ದೆಹಲಿಯ ಐಷಾರಾಮಿ ವಸಂತ್ ಕುಂಜ್ ಪ್ರದೇಶದಲ್ಲಿರುವ ಖಾಸಗಿ ನಿರ್ವಹಣಾ ಸಂಸ್ಥೆಯ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ವಿಚಾರ ಬೆಳಕಿಗೆ ಬಂದಿದೆ. ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ 50 ವಿದ್ಯಾರ್ಥಿನಿಯರ ಮೊಬೈಲ್‌ಗಳಲ್ಲಿ ಪತ್ತೆಯಾದ ವಾಟ್ಸಾಪ್ ಸಂದೇಶಗಳು ಕಳೆದ 16 ವರ್ಷಗಳಿಂದ ವಿದ್ಯಾರ್ಥಿನಿಯರ…

