ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ
ವಿಜಯಪುರ: ಚಡಚಣ: (ಸೆಪ್ಟೆಂಬರ್ 4, 2025): ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಭೀಮಾ ತೀರದ ರೌಡಿಸಂ ಮತ್ತೆ ಮುನ್ನಲೆಗೆ ಬಂದಿದ್ದು, ಕ್ಷೌರದ ಅಂಗಡಿಯಲ್ಲೇ ಗ್ರಾಪಂ ಮಾಜಿ ಅಧ್ಯಕ್ಷ ಭೀಮನಗೌಡ ಬಿರಾದಾರ (40) ಅವರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಬುಧವಾರ ಬೆಳಿಗ್ಗೆ ನಡೆದಿದ್ದು, ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಗೆ ವೈಯಕ್ತಿಕ ದ್ವೇಷ, ಹಣಕಾಸಿನ ವಿವಾದ ಹಾಗೂ ರಾಜಕೀಯ ಎಂಬ ಸಂಶಾತ್ಮಕಬಕಾರಣಗಳು ಪ್ರಮುಖವಾಗಿವೆ ಎಂದು…

