ಅಂಚಟಗೇರಿ ಬಳಿ ಬಸ್-ಬೈಕ್ ಭೀಕರ ಅಪಘಾತ: ತಂದೆ ಮತ್ತು ಮಗು ಸ್ಥಳದಲ್ಲೇ ಸಾವು; ಮತ್ತೊಂದು ಮಗುವಿನ ಸ್ಥಿತಿ ಗಂಭೀರ
ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರವಾರದಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಮತ್ತೊಂದು ಮಗು ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ತಡಸ ಗ್ರಾಮದ ನಿವಾಸಿ ಮೆಹಬೂಬ ಖಾನ್ ಉಸ್ತಾದಿ (36) ಹಾಗೂ ಅವರ ಎರಡು ವರ್ಷದ…

