​ಗುಂಡ್ಲುಪೇಟೆ ಬಳಿ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಗರ್ಭಿಣಿ ಹಾಗೂ ಚಾಲಕ ದುರ್ಮರಣ

​ಚಾಮರಾಜನಗರ: ಜಿಲ್ಲೆಯ ಜನತೆ ಮಳೆ ಮತ್ತು ಬೆಳೆಯ ಲೆಕ್ಕಾಚಾರದಲ್ಲಿ ತೊಡಗಿರುವಾಗಲೇ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿಯ ಮದ್ದಯ್ಯನಹುಂಡಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗರ್ಭಿಣಿ ಮಹಿಳೆ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ​ಕೇರಳದಿಂದ ಚಾಮರಾಜನಗರದ ಕಡೆಗೆ ಬರುತ್ತಿದ್ದ ಕಾರಿಗೆ, ಕೇರಳದತ್ತ ತೆರಳುತ್ತಿದ್ದ ಲಾರಿ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ…

Read More

ದೆಹಲಿಯಲ್ಲಿ ಯುವ ನ್ಯಾಯಾಧೀಶರ ನಿಗೂಢ ಸಾವು: ಕಾನೂನು ವಲಯದಲ್ಲಿ ತಲ್ಲಣ

ನವದೆಹಲಿ: ದೇಶದ ರಾಜಧಾನಿಯಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ 30 ವರ್ಷದ ಯುವ ನ್ಯಾಯಾಧೀಶ ಅಮನ್ ಕುಮಾರ್ ಶರ್ಮಾ ಅವರು ಶನಿವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ. ​ಸಫ್ದರ್ಜಂಗ್ ಎನ್ಕ್ಲೇವ್ ವ್ಯಾಪ್ತಿಯ ಗ್ರೀನ್ ಪಾರ್ಕ್ ಪ್ರದೇಶದಲ್ಲಿರುವ ತಮ್ಮ ನಿವಾಸದ ಸ್ನಾನಗೃಹದಲ್ಲಿ ಶರ್ಮಾ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ಕಾನೂನು ಲೋಕವೇ ಈ ಸುದ್ದಿಯಿಂದ ಬೆಚ್ಚಿಬಿದ್ದಿದೆ. ಶನಿವಾರ ಮಧ್ಯಾಹ್ನ ಸುಮಾರು…

Read More

ಹೆಣ್ಣಿನ ನೆಲೆ, ನೀರಿನ ನೆಲೆ ಯಾರಿಗೆ ಗೊತ್ತು?: ಪತ್ನಿ-ಅಕ್ಕನ ಮಗನ ವಂಚನೆಗೆ ಬಲಿಯಾಯಿತೇ ಸುಂದರ ಸಂಸಾರ?

ತುಮಕೂರು (ಕುಣಿಗಲ್): “ಹೆಣ್ಣಿನ ನೆಲೆ, ಕುದುರೆ ನೆಲೆ ಹಾಗೂ ನೀರಿನ ನೆಲೆ ಯಾರಿಗೂ ತಿಳಿಯದು” ಎಂಬ ಹಿರಿಯರ ಮಾತು ಅಕ್ಷರಶಃ ಸತ್ಯ ಎಂಬಂತೆ ಕುಣಿಗಲ್‌ನಲ್ಲಿ ಒಂದು ಘೋರ ದುರಂತ ಸಂಭವಿಸಿದೆ. ತಾನು ಮಗನಂತೆ ಸಾಕಿ ಸಲಹಿದ ಅಕ್ಕನ ಮಗ ಹಾಗೂ ಜೀವವೇ ಎಂದು ನಂಬಿದ್ದ ಪತ್ನಿಯ ಕಪಟ ನಾಟಕಕ್ಕೆ ಸಿಲುಕಿದ ಶಿವಣ್ಣ ಎಂಬುವವರು, ತಮ್ಮ ಇಬ್ಬರು ಮುದ್ದಾದ ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಬಿಕೆಯ ಬೆನ್ನಿಗೆ ಚೂರಿ ಹಾಕಿದ ಪ್ರಿಯಕರ ಮತ್ತು ಪತ್ನಿಯ ಕೃತ್ಯಕ್ಕೆ ಒಂದು…

Read More

ರಾಯಚೂರು: ಜಾತ್ರೆ ಮುಗಿಸಿ ಮರಳುವಾಗ ಭೀಕರ ಅಪಘಾತ; ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬವೊಂದು ದುರಂತ ಅಂತ್ಯ ಕಂಡಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ​ಘಟನೆಯ ವಿವರ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಚಾಲನೆ ಮಾಡುತ್ತಿದ್ದ ಅಂಜಿನಯ್ಯ ನಾಯಕ (37) ಮತ್ತು ಹತ್ತು ವರ್ಷದ ಬಾಲಕಿ ಅರ್ಚನಾ…

Read More

ಮುಂಡಗೋಡ ಮೀಟರ್ ಬಡ್ಡಿ ಕಿಂಗ್‌ಪಿನ್ ಹತ್ಯೆ ರಹಸ್ಯ ಬಯಲು: ಐವರು ಸುಪಾರಿ ಹಂತಕರ ಬಂಧನ, ಪಿಸ್ತೂಲ್ ವಶ

​ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಸಂಚಲನ ಮೂಡಿಸಿದ್ದ ಮೀಟರ್ ಬಡ್ಡಿ ದಂಧೆಯ ಕಿಂಗ್‌ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣದ ಸುರುಳಿ ಬಿಚ್ಚಿಕೊಂಡಿದೆ. ಬಡ್ಡಿ ದಂಧೆಯ ವೃತ್ತಿ ವೈಷಮ್ಯಕ್ಕಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನ ನೆಲಮಂಗಲದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮುಂಡಗೋಡಿನ ನಿವಾಸಿ ಮಂಜುನಾಥ ಕಾಜಗಾರ ಅಲಿಯಾಸ್ ಮಂಜ್ಯಾ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಂಜುನಾಥ ಹಾಗೂ ಮೃತ ಜಮೀರ್…

Read More

ಹಿರೇನರ್ತಿ ಗ್ರಾಮದಲ್ಲಿ ಜಾಗದ ಕಿರಿಕ್: ಕರಿಯಪ್ಪನ ಮೇಲೆ ಭೀಕರ ಹಲ್ಲೆ

ಕುಂದಗೋಳ: ತಾಲ್ಲೂಕಿನ ಹಿರೇನರ್ತಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಲೆದೋರಿದ ಹಳೆಯ ದ್ವೇಷವೊಂದು ವಿಕೋಪಕ್ಕೆ ತಿರುಗಿದ್ದು, ಒಂದೇ ಮನೆತನದವರ ನಡುವಿನ ಜಗಳದಲ್ಲಿ ಮುಂದುವರೆದು ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಭೀಕರ ಗಲಾಟೆಯಲ್ಲಿ ಕರಿಯಪ್ಪಗೌಡ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ. ಜಾಗದ ವಿಷಯವಾಗಿ ಮಾತಿಗೆ ಮಾತು ಬೆಳೆದು, ಒಂದೇ ಮನೆತನದ ಅಣ್ಣತಮ್ಮಂದಿರಾದ ಪ್ರಜ್ವಲ್ ಗೌಡ , ಸಿದ್ದನಗೌಡ ಹಾಗೂ ಶಿವನಗೌಡ…

Read More

ವಿಜಯನಗರ: ಡಣಾಪುರ ಬಳಿ ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

ವಿಜಯನಗರ: ಜಿಲ್ಲೆಯ ಡಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಿತ್ತೂರು ಗ್ರಾಮದ ನಾಗಪ್ಪ (56), ಇವರ ಪುತ್ರ ಕೊಟ್ರೇಶ್ (22), ಪುತ್ರಿ ಸುಜಾತಾ (35) ಹಾಗೂ ತಿಮ್ಮಲಾಪುರ ಗ್ರಾಮದ ದುರುಗಪ್ಪ (55) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಿತ್ತೂರು ಗ್ರಾಮದ ಈ ನಾಲ್ವರು ಎರಡು…

Read More

ಅಮಾವಾಸ್ಯೆ ದರ್ಶನ ಮುಗಿಸಿ ಬರುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ: ರಾಜ್ಯವನ್ನೇ ನಡುಗಿಸಿದ ಭೀಕರ ದುರಂತ!

​ಯಾದಗಿರಿ: ದೈವದರ್ಶನ ಮುಗಿಸಿ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಅಕ್ಷರಶಃ ಮೃತ್ಯುರೂಪಿಯಾಗಿ ಅಪ್ಪಳಿಸಿದೆ. ಇಂದು ಬೆಳಿಗ್ಗೆ ಸುಮಾರು 9:45ರ ಸುಮಾರಿಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯ ಭೀಕರತೆಗೆ ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲೇ ಸಜೀವ ದಹನಗೊಂಡಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ವ್ಯಾಪ್ತಿಯಲ್ಲಿ ನಡೆದಿದೆ. ​ಬೆಂಗಳೂರಿನಿಂದ ಕಲಬುರಗಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಹಾಗೂ ತಿಂಥಣಿ ಮೌನೇಶ್ವರ ವೇಣುಗೋಪಾಲ ಸ್ವಾಮಿಯ ದರ್ಶನ ಮುಗಿಸಿ ಸಿರವಾರಕ್ಕೆ ಹಿಂತಿರುಗುತ್ತಿದ್ದ ಕಾರಿನ ನಡುವೆ…

Read More

ಯೋಗೀಶಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ; ಏಪ್ರಿಲ್ 16ಕ್ಕೆ ಶಿಕ್ಷೆ ಪ್ರಕಟ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಬುಧವಾರ ಸಂಜೆ ಈ ತೀರ್ಪು ಪ್ರಕಟಿಸಿದ್ದು, ದೋಷಿಗಳನ್ನು ತಕ್ಷಣವೇ ವಶಕ್ಕೆ…

Read More

​ಯೋಗೀಶಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ; ನಾಳೆ ಶಿಕ್ಷೆ ಪ್ರಕಟ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದೆ. ​ನ್ಯಾಯಾಲಯದ ತೀರ್ಪು ​ಶಾಸಕರು ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಬುಧವಾರ ಸಂಜೆ ಈ ಐತಿಹಾಸಿಕ ತೀರ್ಪು ಪ್ರಕಟಿಸಿದರು. ಪ್ರಕರಣದಲ್ಲಿ…

Read More