ಫರೀದಾಬಾದ್ನಲ್ಲಿ ವಶಪಡಿಸಿಕೊಂಡ ಸ್ಫೋಟಕ ಸ್ಪೋಟ: ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ಸಾವು
ಶ್ರೀನಗರ:ಹರಿಯಾಣದ ಫರೀದಾಬಾದ್ನಿಂದ ವಶಪಡಿಸಿಕೊಂಡಿದ್ದ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಸ್ಫೋಟಗೊಂಡ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ಮೃತಪಟ್ಟು, 27ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದುರಂತ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತರಾದವರಲ್ಲಿ ಹೆಚ್ಚಾಗಿ ಪೊಲೀಸ್ ಸಿಬ್ಬಂದಿ ಮತ್ತು ವಿಧಿವಿಜ್ಞಾನ ತಂಡದ (FSL) ಅಧಿಕಾರಿಗಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ, ಇತ್ತೀಚೆಗೆ ಪತ್ತೆಯಾದ ‘ವೈಟ್-ಕಾಲರ್’ ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದಾಬಾದ್ನಿಂದ ವಶಪಡಿಸಿಕೊಂಡಿದ್ದ 360…

