ಪಡಿತರ ಅಕ್ಕಿ ಅಕ್ರಮ ಸಾಗಾಟ: ಪ್ರಮುಖ ಆರೋಪಿ ಸಚಿನ್ ಕಲ್ಕೂರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ 49 ಟನ್ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸಚಿನ್ ಕಲ್ಕೂರನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಮೂಲಕ ಪ್ರಕರಣದ ಹಿಂದಿನ ಬೃಹತ್ ಜಾಲ ಭೇದಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ, ಅಕ್ರಮವಾಗಿ ಸಾಗಿಸಲಾಗುತ್ತಿದ್ದ 49 ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ಎರಡು ಲಾರಿಗಳು ಸೇರಿದಂತೆ ಹಲವು ವಾಹನಗಳನ್ನು ಜಪ್ತಿ ಮಾಡಲಾಗಿತ್ತು ಮತ್ತು ಒಂಭತ್ತು…

Read More

ಲಂಚ ಪ್ರಕರಣ: ಲೋಕಾಯುಕ್ತ ಬಲೆಗೆ: ಇಬ್ಬರು ಅಧಿಕಾರಿಗಳಿಗೆ ಜೈಲು ಶಿಕ್ಷೆ

ಧಾರವಾಡ: ನ್ಯಾಯಯುತವಾಗಿ ಮಾಡಬೇಕಾಗಿದ್ದ ಕೆಲಸಕ್ಕೆ ₹10,000 ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಧಾರವಾಡದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಕುರಿತು ಧಾರವಾಡ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕಾನೂನು ಮಾಪನಶಾಸ್ತ್ರ ಇಲಾಖೆ, ಎಪಿಎಂಸಿ, ಹುಬ್ಬಳ್ಳಿಯ ಸಹಾಯಕ ನಿಯಂತ್ರಕರಾಗಿದ್ದ ಮಧುಕರ ರಾಜಾರಾಮ ಘೋಡಕೆ ಮತ್ತು ಅದೇ ಕಚೇರಿಯ ಎಸ್.ಡಿ.ಎ. ಎಸ್.ಎನ್. ಲೀಲಾವತಿ ಅವರು ಲಂಚ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿದ್ದಾರೆ….

Read More

ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ

ವಿಜಯಪುರ: ಚಡಚಣ: (ಸೆಪ್ಟೆಂಬರ್ 4, 2025): ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಭೀಮಾ ತೀರದ ರೌಡಿಸಂ ಮತ್ತೆ ಮುನ್ನಲೆಗೆ ಬಂದಿದ್ದು, ಕ್ಷೌರದ ಅಂಗಡಿಯಲ್ಲೇ ಗ್ರಾಪಂ ಮಾಜಿ ಅಧ್ಯಕ್ಷ ಭೀಮನಗೌಡ ಬಿರಾದಾರ (40) ಅವರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಬುಧವಾರ ಬೆಳಿಗ್ಗೆ ನಡೆದಿದ್ದು, ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಗೆ ವೈಯಕ್ತಿಕ ದ್ವೇಷ, ಹಣಕಾಸಿನ ವಿವಾದ ಹಾಗೂ ರಾಜಕೀಯ ಎಂಬ ಸಂಶಾತ್ಮಕಬಕಾರಣಗಳು ಪ್ರಮುಖವಾಗಿವೆ ಎಂದು…

Read More

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣ, ನಟಿ ರನ್ಯಾ ರಾವ್‌ಗೆ 1,102 ಕೋಟಿ ಮೊತ್ತದ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ₹1,102 ಕೋಟಿ ದಂಡ ವಿಧಿಸಿದೆ. ಸುಮಾರು 127 ಕೆಜಿ ಚಿನ್ನ ಅಕ್ರಮವಾಗಿ ಸಾಗಣೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14.2 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾಗ ರನ್ಯಾ ರಾವ್‌ ಮಾರ್ಚ್ 3ರಂದು ಡಿಆರ್‌ಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಉದ್ಯಮಿ ತರುಣ್ ಕೊಂಡರಾಜು,…

Read More

ಬೀದರ್‌: ₹12 ಕೋಟಿ ಮೌಲ್ಯದ ಅಕ್ರಮ ಗುಟ್ಕಾ ಜಪ್ತಿ, 8 ಮಂದಿ ಬಂಧನ

ಬೀದರ್: ನಗರದಲ್ಲಿ ಅಕ್ರಮವಾಗಿ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಸುತ್ತಿದ್ದ ಜಾಲವನ್ನು ಭೇದಿಸಿರುವ ಗಾಂಧಿಗಂಜ್ ಹಾಗೂ ನೂತನ ನಗರ ಠಾಣೆ ಪೊಲೀಸರು, 12 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎಂಟು ಜನ ಆರೋಪಿಗಳನ್ನು ವಶಕ್ಕೆ ಪಡೆದು, ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರನ್ನು ತೆಲಂಗಾಣದ ತನ್ವಿರ್, ಬೀದರ್‌ನ ರಿಜ್ವಾನ್, ತನ್ನೀರ್ ಶೇರಿಕಾರ್, ಮಣಿಪುರದ ಥೋಂಬಲ್ ಮೌಜಿಂಗ್‌ನ ಯಾಸೀನ್, ಬಿಶೇನಪುರ ಕೊಕ್ಕಾದ ಮುಹಮ್ಮದ್ ಸಿರಾಜ್ ಖಾನ್, ಮುಹಮ್ಮದ್ ಷರೀಫ್ ಖಾನ್, ಮುಹಮ್ಮದ್…

Read More

ಡಿ.ಜೆ.ಗೆ ನಿರ್ಬಂಧ: ಸರ್ಕಾರದ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಹಾವೇರಿಯಲ್ಲಿ ಮೊದಲ ಎಫ್‌ಐಆರ್‌ ದಾಖಲು!

ಹಾವೇರಿ: ಗಣೇಶೋತ್ಸವದ ಮೆರವಣಿಗೆಗಳಲ್ಲಿ ಡಿ.ಜೆ. (ಡಿಸ್ಕ್ ಜಾಕಿ) ಬಳಸದಂತೆ ಸರ್ಕಾರ ನೀಡಿರುವ ಕಟ್ಟುನಿಟ್ಟಿನ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಹಾವೇರಿ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ನಿಯಮ ಮೀರಿ ಡಿ.ಜೆ. ಬಳಸಿದ ಆರೋಪದಡಿ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದ ಗಣೇಶೋತ್ಸವದ ಮೊದಲ ಎಫ್‌ಐಆರ್ ದಾಖಲಾಗಿದೆ. ಯುವ ಸಮುದಾಯ ಸಂಭ್ರಮದ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತಂದರೆ ಕಾನೂನು ಕ್ರಮ ಎದುರಿಸುವುದು ಅನಿವಾರ್ಯ ಎಂಬುದನ್ನು ಈ ಘಟನೆ ಎತ್ತಿ ತೋರಿಸಿದೆ. ಘಟನೆ ವಿವರಹಾವೇರಿಯ ಸುಭಾಷ್ ವೃತ್ತದಲ್ಲಿ ‘ಹಾವೇರಿ…

Read More

ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ನೀಡುತ್ತಿದ್ದ ಡಾ: ಗ್ರಾಡೆಲಿನ್ ರಾಯ್ ತಾವು ಹೃದಯಾಘಾತದಿಂದ ಸಾವು

ಚೆನ್ನೈ: ತಾವು ಚಿಕಿತ್ಸೆ ನೀಡುತ್ತಿದ್ದ ಹೃದಯ ಸಂಬಂಧಿ ಕಾಯಿಲೆಗೇ ಯುವ ವೈದ್ಯರೊಬ್ಬರು ಬಲಿಯಾಗಿರುವ ಹೃದಯವಿದ್ರಾವಕ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದ 39 ವರ್ಷದ ಹೃದಯ ಶಸ್ತ್ರಚಿಕಿತ್ಸಕ ಡಾ. ಗ್ರಾಡೆಲಿನ್ ರಾಯ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಚೆನ್ನೈನ ಸವಿತಾ ವೈದ್ಯಕೀಯ ಕಾಲೇಜಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕನ್ಸಲ್ಟೆಂಟ್ ಕಾರ್ಡಿಯಾಕ್ ಸರ್ಜನ್ ಆಗಿದ್ದ ಡಾ. ಗ್ರಾಡೆಲಿನ್ ರಾಯ್ ಅವರು ವಾರ್ಡ್ ಸುತ್ತುಗಳ ಸಮಯದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರ ಸಹೋದ್ಯೋಗಿಗಳು ಅವರನ್ನು ರಕ್ಷಿಸಲು ಮುಂದಾಗಿದ್ದಾರೆ.ತಕ್ಷಣವೇ ಅವರಿಗೆ ಸಿಪಿಆರ್…

Read More

ಸಾಲ ಭಾಧೆ ತಾಳಲಾರದೆ ಅಮರಗೋಳದ ರೈತ ಆತ್ಮಹತ್ಯೆ

ನವಲಗುಂದ: ತಾಲ್ಲೂಕಿನ ಅಮರಗೋಳ ಗ್ರಾಮದ ಯುವ ರೈತ ಕಾಂತೇಶ ಯಲ್ಲಪ್ಪ ದೊಡ್ಡಮನಿ (28) ಅವರು ಬೆಳೆ ನಷ್ಟ ಮತ್ತು ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತ ಘಟನೆಯು ತೀವ್ರ ಸಂಕಟವನ್ನುಂಟು ಮಾಡಿದೆ ಎಂದು ನವಲಗುಂದ ಮತಕ್ಷೇತ್ರದ ಮಾಜಿ ಸಚಿವರಾದ ಶಂಕರಪಾಟೀಲ ಮುನೇನಕೊಪ್ಪ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ಘಟನೆಯ ವಿವರ:ರೈತ ಕಾಂತೇಶ ದೊಡ್ಡಮನಿ ಅವರು ಕೆವಿಜಿಬಿ ಬ್ಯಾಂಕ್‌ನಲ್ಲಿ ₹4 ಲಕ್ಷ ಮತ್ತು ವಿವಿಧ ಸಂಘಗಳಿಂದ ₹1.5 ಲಕ್ಷ ಸೇರಿ ಅಂದಾಜು ₹5.5 ಲಕ್ಷ ಸಾಲ…

Read More

ದೊಡ್ಡಬಳ್ಳಾಫುರ:ಪಟಾಕಿ ಅವಘಡ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಲಕ ಸಾವು, ಹಲವರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಪಟಾಕಿ ಅವಘಡದಿಂದ 15 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಪೊಲೀಸ್ ಕಾನ್ಸ್ಟೆಬಲ್ ಸೇರಿ ಹಲವರು ಗಾಯಗೊಂಡಿರುವ ದುರ್ಘಟನೆ ದೊಡ್ಡಬಳ್ಳಾಪುರ ಹೊರವಲಯದ ಮುತ್ತೂರಿನಲ್ಲಿ ನಡೆದಿದೆ.ಮೃತ ಬಾಲಕನನ್ನು ತನುಷ್ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತನುಷ್ ರಾವ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿವರ:ಶುಕ್ರವಾರ ಸಂಜೆ 5.30ರ ಸುಮಾರಿಗೆ ‘ಫ್ರೆಂಡ್ಸ್ ವಿನಾಯಕ ಗ್ರೂಪ್’ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಗೆ…

Read More

ಬೆನಕನಹಳ್ಳಿ: ಬೈಕ್ ಸ್ಕಿಡ್ ಆಗಿ ಬಿದ್ದು ಮಹಿಳೆ ಸಾವು, ಚಾಲಕನಿಗೆ ಗಾಯ

ಕುಂದಗೋಳ: ಅಜಾಗರೂಕತೆಯ ಚಾಲನೆಯಿಂದಾಗಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆನಕನಹಳ್ಳಿ-ಮುಳ್ಳಹಳ್ಳಿ ರಸ್ತೆಯಲ್ಲಿ ನಡೆದಿದೆ. ಆಗಸ್ಟ್ 24ರ ರಾತ್ರಿ 8:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆ ವಿವರಶಿರಗುಪ್ಪಿ ಗ್ರಾಮದ ಶಿವಕುಮಾರ್ (28) ಎಂಬಾತನು ಕೆಎ-63/ಎಲ್-7661 ಸಂಖ್ಯೆಯ ತನ್ನ ಮೋಟಾರ್‌ಸೈಕಲ್‌ನಲ್ಲಿ ಬೆನಕನಹಳ್ಳಿ ಕಡೆಯಿಂದ ಮುಳ್ಳಹಳ್ಳಿ ಕಡೆಗೆ ವಾಹನ ಚಲಾಯಿಸುತ್ತಿದ್ದನು. ಈ ಸಂದರ್ಭದಲ್ಲಿ ವಾಹನ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆಯ ಮೇಲೆ ಬಿದ್ದಿದೆ. ಇದರ ಪರಿಣಾಮ, ಬೈಕ್‌ನ…

Read More