ಭಾರತದಲ್ಲಿ ಹೆಚ್ಚಿದ ರಸ್ತೆ ಅಪಘಾತ: 2023ರಲ್ಲಿ ಪ್ರತಿ ಗಂಟೆಗೆ 20 ಸಾವು
ನವದೆಹಲಿ: ಭಾರತದಲ್ಲಿ ರಸ್ತೆ ಅಪಘಾತಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬಿಡುಗಡೆ ಮಾಡಿದ ‘ಭಾರತದಲ್ಲಿ ರಸ್ತೆ ಅಪಘಾತಗಳು 2023’ ವರದಿಯ ಪ್ರಕಾರ, ಕಳೆದ ವರ್ಷ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಶೇ. 4.2ರಷ್ಟು ಏರಿಕೆಯಾಗಿದೆ. 2023ರಲ್ಲಿ ಒಟ್ಟು 4.8 ಲಕ್ಷ ಅಪಘಾತಗಳು ಸಂಭವಿಸಿದ್ದು, ಪ್ರತಿ ಗಂಟೆಗೆ ಸರಾಸರಿ 20 ಮಂದಿ ಸಾವಿಗೀಡಾಗಿದ್ದಾರೆ. ವರದಿಯ ಪ್ರಮುಖಾಂಶಗಳು ಹೀಗಿವೆ: ರಾಜ್ಯವಾರು ವರದಿ: ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ತಮಿಳುನಾಡು ಮುಂಚೂಣಿಯಲ್ಲಿದ್ದರೆ, ಸಾವನ್ನಪ್ಪಿದವರ ಸಂಖ್ಯೆ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚಿದೆ….

