ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ: ಕ್ಷೇತ್ರ ಪುನರ್ ವಿಂಗಡಣೆಗೆ ನ. 15ರವರೆಗೆ ಸುಪ್ರೀಂ ಗಡುವು ವಿಸ್ತರಣೆ
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಯ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನವೆಂಬರ್ 15ರವರೆಗೆ ಕಾಲಾವಕಾಶ ನೀಡಿದೆ. ವಾರ್ಡ್ ಮೀಸಲಾತಿ ಪ್ರಕಟಿಸಲು ಡಿಸೆಂಬರ್ 15ರವರೆಗೆ ಗಡುವು ನೀಡಲಾಗಿದೆ. ಕಾಂಗ್ರೆಸ್ ಮುಖಂಡ ಎಂ. ಶಿವರಾಜು ಮತ್ತು ಇತರರು ಸಲ್ಲಿಸಿದ್ದ GBA ಚುನಾವಣೆ ಸಂಬಂಧಿತ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಉಜ್ವಲ್ ಭುಯಾನ್ ಮತ್ತು ಜೋಯ್ ಮಲ್ಯ ಭಾಗ್ನಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ನಡೆಸಿತು. 📅…

