ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳು ಎಂಬ ಶಂಕೆ: ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳು ಎಂಬ ಶಂಕೆ: ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಹರಿಯಾಣ: ಅಕ್ರಮ ಸಂಬಂಧಕ್ಕೆ ಪತ್ನಿ ಅಡ್ಡಿಯಾಗಬಹುದು ಎಂಬ ಶಂಕೆಯಿಂದ ಮದುವೆಯಾದ ಕೇವಲ ಮೂರು ತಿಂಗಳಲ್ಲೇ ಪತಿಯೊಬ್ಬ ತನ್ನ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಂಕಿತ್ (25) ಮಾನೇಸರ್ ನಿವಾಸಿಯಾಗಿದ್ದು, ತಂಬಾಕು ಅಂಗಡಿ ನಡೆಸುತ್ತಿದ್ದಾನೆ. ಈತನಿಗೆ…

Read More

126 ವರ್ಷಗಳಲ್ಲೇ 5ನೇ ಅತಿ ಶುಷ್ಕ ಜೂನ್: ಜುಲೈನಲ್ಲೂ ಕಡಿಮೆ ಮಳೆಯ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ಈ ವರ್ಷ ಮುಂಗಾರು ನಿರೀಕ್ಷೆಯಂತೆ ಚುರುಕುಗೊಳ್ಳದೆ, ಜೂನ್ ತಿಂಗಳಲ್ಲಿ ತೀವ್ರ ಮಳೆ ಕೊರತೆ ದಾಖಲಾಗಿದೆ. 126 ವರ್ಷಗಳಲ್ಲೇ 2026ರ ಜೂನ್ ತಿಂಗಳು 5ನೇ ಅತಿ ಶುಷ್ಕ ಜೂನ್ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಜೊತೆಗೆ, ಜುಲೈ ತಿಂಗಳಲ್ಲೂ ದೇಶದ ಬಹುತೇಕ ಭಾಗಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಐಎಂಡಿ ಮುಖ್ಯಸ್ಥ ಡಾ. ಮೃತ್ಯುಂಜಯ ಮಹಾಪಾತ್ರ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ ಜೂನ್ ತಿಂಗಳಲ್ಲಿ…

Read More

RSS ಕಾರ್ಯಕರ್ತ ನಾರಾಯಣ ಅವರ ಅಂತ್ಯಕ್ರೀಯೆ ನೆರವೇರಿಸಿದ ಮುಸ್ಲಿಂ ಮಹಿಳೆ ಇರ್ಫಾನಾ

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಾನವೀಯತೆ ಮತ್ತು ಧಾರ್ಮಿಕ ಸೌಹಾರ್ದದ ಅಪರೂಪದ ಘಟನೆ ನಡೆದಿದೆ. ಕ್ಯಾನ್ಸರ್‌ನಿಂದ ಮೃತಪಟ್ಟ ಮಾಜಿ ಆರ್‌ಎಸ್‌ಎಸ್(RSS) ಕಾರ್ಯಕರ್ತ ನಾರಾಯಣ ತೊಟ್ಟತ್ತೋಡಿ (64) ಅವರ ಅಂತ್ಯಸಂಸ್ಕಾರವನ್ನು ಮುಸ್ಲಿಂ ಮಹಿಳೆ ಇರ್ಫಾನಾ ಇಕ್ಬಾಲ್ ನೆರವೇರಿಸಿದ್ದು, ಈ ಘಟನೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕ್ಯಾನ್ಸರ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣ ಅವರು ಗುರುವಾರ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಶುಕ್ರವಾರ ಅವರ ಸ್ವಗ್ರಾಮವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬ್ಲಾಕ್‌ನ ಮೀಂಜ ಪಂಚಾಯಿತಿಯ ಚಿಗ್ರುಪಾಡವು ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು….

Read More

“ವಾಡಿಕೆ ಮಳೆಯ ಆಸೆನೇ ಬಿಟ್ಟುಬಿಡಿ!”: ದೇಶಾದ್ಯಂತ ಶೇ.42ರಷ್ಟು ಮುಂಗಾರು ಕೊರತೆ, ಹವಾಮಾನ ಇಲಾಖೆಯ ಎಚ್ಚರಿಕೆ

ನವದೆಹಲಿ, ಜೂ.19: ದೇಶಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರಗಳು ಕಳೆದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ದೇಶಾದ್ಯಂತ ಮಳೆ ಕೊರತೆ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮಾಹಿತಿಯ ಪ್ರಕಾರ, ಜೂನ್ 18ರವರೆಗೆ ದೇಶದಲ್ಲಿ ವಾಡಿಕೆಯಂತೆ 72.2 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 42.1 ಮಿ.ಮೀ. ಮಳೆಯಷ್ಟೇ ದಾಖಲಾಗಿದ್ದು, ಒಟ್ಟಾರೆ ಮುಂಗಾರು ಕೊರತೆ ಶೇ.42ಕ್ಕೆ ತಲುಪಿದೆ. ಜೂನ್ 4ರಂದು ದೇಶಕ್ಕೆ ಮುಂಗಾರು ಪ್ರವೇಶಿಸಿದ್ದರೂ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಅಗತ್ಯ ಪ್ರಮಾಣದ ವಾಯುಭಾರ ಕುಸಿತ…

Read More

ದುಂದುವೆಚ್ಚದ ಮದುವೆಗಳ ನಡುವೆ ಆಶಾಕಿರಣ: 3,465 ಗ್ರಾಮಸ್ಥರಿಗೆ ₹33.6 ಕೋಟಿ ಮೊತ್ತದ ವಿಮಾ ಕವಚ ನೀಡಿದ ವರ*

ನಾಂದೇಡ್ (ಮಹಾರಾಷ್ಟ್ರ): ಇತ್ತೀಚಿನ ದಿನಗಳಲ್ಲಿ ಮದುವೆ ಎಂದರೆ ಲಕ್ಷಾಂತರ ರೂಪಾಯಿ ಖರ್ಚು, ಅದ್ಧೂರಿ ವೇದಿಕೆ, ವೈಭವದ ಅಲಂಕಾರ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುವ ಕಾರ್ಯಕ್ರಮ ಎಂಬಂತಾಗಿದೆ. ಅನೇಕರು ತಮ್ಮ ಸಾಮರ್ಥ್ಯ ಮೀರಿಯೂ ಸಾಲ ಮಾಡಿ ಮದುವೆಗಳನ್ನು ವಿಜೃಂಭಣೆಯಿಂದ ನಡೆಸುವ ಪ್ರವೃತ್ತಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಯುವಕನೊಬ್ಬ ತನ್ನ ವಿವಾಹವನ್ನು ಸಮಾಜಮುಖಿ ಕಾರ್ಯದೊಂದಿಗೆ ಜೋಡಿಸಿ ಎಲ್ಲರ ಗಮನ ಸೆಳೆದಿದ್ದಾನೆ. ನಾಂದೇಡ್ ಜಿಲ್ಲೆಯ ಬಹಾದ್ದೂರ್‌ಪುರ ಗ್ರಾಮದ ಸಿದ್ಧೇಶ್ವರ್ ಪೇಠ್ಕರ್ ಅವರು ತಮ್ಮ ಮದುವೆಯ ಸಂಭ್ರಮವನ್ನು…

Read More

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವ: ಕೊಹ್ಲಿ ಬ್ಯಾಟಿಂಗ್ ಅಬ್ಬರಕ್ಕೆ ಧೂಳೀಪಟವಾದ ಜಿಟಿ”

ಗುಜರಾತ್: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಾಟಾ ಐಪಿಎಲ್ 2026ರ ಮಹಾ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ತಂಡದ ಬೌಲರ್‌ಗಳು ಹಾಗೂ ಬ್ಯಾಟರ್‌ಗಳು ಅದನ್ನು ಸಮರ್ಥವಾಗಿ ಸಾಬೀತುಪಡಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭದಲ್ಲೇ…

Read More

ತಲೆ ಬೋಳಿಸಿಕೊಂಡ ಕೂಲಿ ಕಾರ್ಮಿಕನನ್ನು ಗುರುತಿಸದ ಡಿಜಿಟಲ್ ಹಾಜರಾತಿ ಆ್ಯಪ್; ಮಹಿಳೆಯ ಕೂದಲಿನಿಂದ ಸಿಕ್ಕ ಪರಿಹಾರ!

ಹೈದರಾಬಾದ್, ಮೇ 30: ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಕೆಲವೊಮ್ಮೆ ಅದರಲ್ಲಿನ ಲೋಪದೋಷಗಳು ಜನರನ್ನು ಸಂಕಷ್ಟಕ್ಕೆ ಸಿಲುಕಿಸುವುದರ ಜೊತೆಗೆ ಹಾಸ್ಯಾಸ್ಪದ ಘಟನೆಗಳಿಗೂ ಕಾರಣವಾಗುತ್ತವೆ. ಇಂತಹ ವಿಚಿತ್ರ ಪ್ರಸಂಗವೊಂದು ತೆಲಂಗಾಣದಲ್ಲಿ ನಡೆದಿದ್ದು, ದೇವಸ್ಥಾನದಲ್ಲಿ ಹರಕೆ ಸಲ್ಲಿಸಿ ತಲೆ ಬೋಳಿಸಿಕೊಂಡು ಬಂದ ಕೂಲಿ ಕಾರ್ಮಿಕನನ್ನು ಸರ್ಕಾರದ ಡಿಜಿಟಲ್ ಹಾಜರಾತಿ ಆ್ಯಪ್ ಗುರುತಿಸಲು ನಿರಾಕರಿಸಿದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಇನುಗುರ್ತಿ ಮಂಡಲದ ಕೋಮಟಿಪಲ್ಲಿ ಗ್ರಾಮದ ದಿನಗೂಲಿ ಕಾರ್ಮಿಕ ಮಳ್ಳಾಲ ಶ್ರೀನಿವಾಸ್ ಇತ್ತೀಚೆಗೆ ಕೊಂಡಗಟ್ಟು…

Read More

ಡಿ.ಕೆ. ಶಿವಕುಮಾರ್‌ಗೆ ಸಿಎಂ ಪಟ್ಟ? ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಚರ್ಚೆ

ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದೊಂದು ವರ್ಷದಿಂದ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರಕ್ಕೆ ಅಂತಿಮ ರೂಪ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡುವ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಸರ್ವಾನುಮತದ ಬೆಂಬಲ ವ್ಯಕ್ತಪಡಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ನೀಡುವ ಜೊತೆಗೆ ದೆಹಲಿಯಲ್ಲಿ ಪ್ರಮುಖ ರಾಷ್ಟ್ರೀಯ ಜವಾಬ್ದಾರಿ ವಹಿಸುವಂತೆ ಪಕ್ಷದ ನಾಯಕತ್ವ ಮನವಿ ಮಾಡಿದೆ ಎನ್ನಲಾಗಿದೆ. ಈ ಕುರಿತು ಅಂತಿಮ…

Read More

ಒಬಾಮಾ ದಂಪತಿ ಭೇಟಿ ಹಿನ್ನೆಲೆ: ಮಂಡ್ಯದಲ್ಲಿ ₹711.4 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಸರ್ಕಾರ ಸಜ್ಜು

ಮಂಡ್ಯ: ಜಾಗತಿಕ ಮಟ್ಟದ ಗಣ್ಯರ ಭೇಟಿ ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿಗೆ ಹೇಗೆ ವೇಗ ನೀಡಬಲ್ಲದು ಎಂಬುದಕ್ಕೆ ಮಂಡ್ಯ ಜಿಲ್ಲೆಯ ಬೆಳವಣಿಗೆಯೊಂದು ಗಮನ ಸೆಳೆಯುತ್ತಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಅವರ ಪತ್ನಿ, ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಅವರ ನಿರೀಕ್ಷಿತ ಭೇಟಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಹೊರವಲಯದ ಹಲ್ಲೆಗೆರೆ ಗ್ರಾಮದ ಸಂಪರ್ಕ ರಸ್ತೆಯನ್ನು ₹711.4 ಕೋಟಿ ವೆಚ್ಚದಲ್ಲಿ ಆಧುನೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಗ್ರಾಮದ ಸಮೀಪ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ…

Read More

ತಮಿಳುನಾಡಿನಲ್ಲಿ ಹೊಸ ಯುಗಾರಂಭ: ನಾಳೆ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪದಗ್ರಹಣ

ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ನಡೆದಿದ್ದ ದ್ರಾವಿಡ ಪಕ್ಷಗಳ ಏಕಸ್ವಾಮ್ಯಕ್ಕೆ ತೆರೆ ಬಿದ್ದಿದ್ದು, ನಾಳೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ವಿಜಯ್ ನೇತೃತ್ವದ ಟಿವಿಕೆ, ನಾಳೆ ರಾಜ್ಯಪಾಲರ ಮುಂದೆ ತನ್ನ ಸಂಖ್ಯಾಬಲವನ್ನು ಅಧಿಕೃತವಾಗಿ ಸಾಬೀತುಪಡಿಸಿ ಸರ್ಕಾರ ರಚನೆ ಮಾಡಲಿದೆ.​ವಿಜ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ…

Read More