ಮಹಾರಾಷ್ಟ್ರ ಪ್ರವಾಹ ಸಂತ್ರಸ್ತರ ನೆರವಿಗೆ ‘ಮಹಾಯುತಿ’ ಮೈತ್ರಿಕೂಟ: ಒಂದು ತಿಂಗಳ ಸಂಬಳ ದಾನ
ಮುಂಬೈ: ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದ ಸಂತ್ರಸ್ತರಾಗಿರುವವರಿಗೆ ನೆರವಾಗಲು ಆಡಳಿತರೂಢ ‘ಮಹಾಯುತಿ’ ಮೈತ್ರಿಕೂಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ, ಶಿವಸೇನಾ ಮತ್ತು ಎನ್ಸಿಪಿ ಪಕ್ಷಗಳ ಶಾಸಕರು ಹಾಗೂ ಸಚಿವರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಿದ್ದಾರೆ. ಮಹಾರಾಷ್ಟ್ರ ಸಚಿವರು ಮತ್ತು ಸಂಸದರೂ ಸಹ ಒಂದು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಲಿದ್ದಾರೆ ಎಂದು ಬಿಜೆಪಿ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಪಕ್ಷಗಳು ಪ್ರತ್ಯೇಕವಾಗಿ ಪ್ರಕಟಿಸಿವೆ….

