ಉಪರಾಷ್ಟ್ರಪತಿ ಚುನಾವಣೆ: ಎನ್ಡಿಎಗೆ ಭರ್ಜರಿ ಬಹುಮತದಿಂದ ಪಿ. ರಾಧಾಕೃಷ್ಣನ್ ಅವರು 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆ,
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕರಾದ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಮಂಗಳವಾರ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಭರ್ಜರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಈ ಗೆಲುವಿನೊಂದಿಗೆ, ಅವರು ತಮಿಳುನಾಡಿನಿಂದ ಈ ಉನ್ನತ ಹುದ್ದೆಗೇರಿದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆರೋಗ್ಯದ ಕಾರಣ ನೀಡಿ ಜುಲೈ 21ರಂದು ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರ ಸ್ಥಾನವನ್ನು 67 ವರ್ಷ ವಯಸ್ಸಿನ ರಾಧಾಕೃಷ್ಣನ್ ತುಂಬಲಿದ್ದಾರೆ. ಬೆಳಗ್ಗೆ 10 ರಿಂದ ಸಂಜೆ 5…

