ಬೆಂಗಳೂರು: ಪಟಾಕಿ ಸಿಡಿತದಿಂದ ನೂರಾರು ಮಂದಿಗೆ ಗಾಯ; ಐವರಿಗೆ ಗಂಭೀರ ಸ್ಥಿತಿ
ಬೆಂಗಳೂರು, ಅ. 22: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಸಿಡಿತದಿಂದ ಸಂಭವಿಸಿದ ಅನಾಹುತಗಳಲ್ಲಿ ಗಾಯಗೊಂಡವರ ಸಂಖ್ಯೆ ನೂರಕ್ಕೂ ಅಧಿಕವಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಪಟಾಕಿ ಸಂಬಂಧಿತ ಅಪಘಾತಗಳಿಂದ ನೂರಾರು ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳ ಪೈಕಿ ಐವರು ಗಂಭೀರ ಸ್ಥಿತಿಯಲ್ಲಿದ್ದು, ದೃಷ್ಟಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಹೆಚ್ಚಿದ ಗಾಯಾಳುಗಳ ಸಂಖ್ಯೆ:ಪ್ರಮುಖವಾಗಿ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆ, ನಾರಾಯಣ ನೇತ್ರಾಲಯ, ಶಂಕರ ಕಣ್ಣಿನ…

