ಅಕ್ಟೋಬರ್ 17 ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: 200ಕ್ಕೂ ಹೆಚ್ಚು ಕಂಪನಿಗಳ ಭಾಗಿ; ಸಿಎಂ ಸಿದ್ದರಾಮಯ್ಯ ಕರೆ
ಮೈಸೂರು: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಅಕ್ಟೋಬರ್ 17 ರಂದು (ನಾಳೆ) ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಿಂದ ಈ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದ್ದು, ಯುವಕರು ಮತ್ತು ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಕರೆ ನೀಡಲಾಗಿದೆ. 200ಕ್ಕೂ ಅಧಿಕ ಕಂಪನಿಗಳು ಭಾಗಿ:ಈ ಉದ್ಯೋಗ ಮೇಳದಲ್ಲಿ ಸುಮಾರು 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ. ವಿವಿಧ ಕ್ಷೇತ್ರಗಳಲ್ಲಿನ ಉದ್ಯೋಗಾವಕಾಶಗಳಿಗಾಗಿ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

