ಒಳ ಮೀಸಲಾತಿ: ಸರ್ಕಾರದ ವಿರುದ್ಧ ಬಂಜಾರ, ಭೋವಿ, ಕೊರಚ ಸಮುದಾಯಗಳ ಪ್ರತಿಭಟನೆ
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಸ್ತೆ ತಡೆದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಪ್ರತಿಭಟನೆಯ ಹಿನ್ನೆಲೆ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನ್ಯಾ. ನಾಗಮೋಹನ್ ದಾಸ್ ಸಮಿತಿ ವರದಿಯ ಆಧಾರದ ಮೇಲೆ ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ಎಡಗೈ, ಬಲಗೈ ಮತ್ತು ಸ್ಪೃಶ್ಯ ಜಾತಿಗಳಿಗೆ ಪ್ರತ್ಯೇಕವಾಗಿ…

