ಪಿಒಪಿ ಗಣೇಶ ಮೂರ್ತಿ ನಿಷಿದ್ಧ: ಮಾರಾಟಗಾರರು, ತಯಾರಕರಿಗೆ ₹10 ಸಾವಿರ ದಂಡ, ಜೈಲು ಶಿಕ್ಷೆ ಎಚ್ಚರಿಕೆ
ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಮತ್ತು ಬಣ್ಣಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸುವವರಿಗೆ ₹10,000 ವರೆಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತು ರಾಜ್ಯ ಸರ್ಕಾರವು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಬಳಕೆಯನ್ನು ನಿಷೇಧಿಸಿ ಆದೇಶ…

