ರಸ್ತೆ ಗಲಾಟೆ ಪ್ರಕರಣದ ಬೆನ್ನಲ್ಲೇ ಮಾಲೂರು ಪ್ರಧಾನ ಸಿವಿಲ್ ನ್ಯಾಯಾಧೀಶೆ ಗಾಯತ್ರಿ ಬೀದರ್ ಜಿಲ್ಲೆಗೆ ವರ್ಗಾವಣೆ
ಬೆಂಗಳೂರು: ರಸ್ತೆಯಲ್ಲಿ ನಡೆದ ಗಲಾಟೆ ಹಾಗೂ ಅಧಿಕಾರ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಗಾಯತ್ರಿ ಅವರನ್ನು ಬೀದರ್ ಜಿಲ್ಲೆಯ ಹುಮನಾಬಾದ್ ಪ್ರಧಾನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆ ಪ್ರಕಾರ, ನ್ಯಾಯಾಧೀಶೆ ಗಾಯತ್ರಿ ಅವರು ಮಾಲೂರಿನಲ್ಲಿ ತಮ್ಮ ಖಾಸಗಿ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ…

