ಮತ್ತಷ್ಟು ಗ್ರಾಮ ಪಂಚಾಯಿತಿಗಳು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ: ಸಚಿವ ಸಂಪುಟ ಮಹತ್ವದ ನಿರ್ಣಯ
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಅಭಿವೃದ್ಧಿ ಉದ್ದೇಶದಿಂದ ರಾಜ್ಯ ಸಚಿವ ಸಂಪುಟವು ಮಹತ್ವದ ನಿರ್ಣಯ ಕೈಗೊಂಡಿದ್ದು, ವಿವಿಧ ಜಿಲ್ಲೆಗಳ ಹಲವು ಪ್ರಮುಖ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದೆ. ಇದರಿಂದಾಗಿ ಈ ಪ್ರದೇಶಗಳಲ್ಲಿ ನಗರ ಮಾದರಿಯ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತು ಉತ್ತಮ ಆಡಳಿತಕ್ಕೆ ಅವಕಾಶ ದೊರೆಯಲಿದೆ. ಬೀದರ್ ಜಿಲ್ಲೆಯ ಕಮಠಾಣಾ, ಮನ್ನಾಏಖಳ್ಳಿ ಮತ್ತು ಹುಲಸೂರು ಗ್ರಾಮ ಪಂಚಾಯಿತಿಗಳು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿವೆ. ಅದೇ ರೀತಿ, ಬೆಳಗಾವಿ ಜಿಲ್ಲೆಯಲ್ಲಿ ಕೂಡಾ ಅಂಕಲಿ, ಸುರೇಬಾನಾ,…

