ಧಾರವಾಡದಲ್ಲಿ ಮಾರ್ಚ್ 28ರಂದು ವಿಶ್ವ ರಂಗಭೂಮಿ ದಿನಾಚರಣೆ: ಮಾಲತಿ ಕುಂದಾಪುರ ಅವರಿಗೆ ‘ರಂಗ ಸ್ನೇಹಿತ’ ಪ್ರಶಸ್ತಿ ಪ್ರದಾನ
ಧಾರವಾಡ: ನಗರದ ಸ್ನೇಹಿತರು ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ವಿಶೇಷ ಸಮಾರಂಭವನ್ನು ಮಾರ್ಚ್ 28ರಂದು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 5:30ಕ್ಕೆ ಧಾರವಾಡದ ಜಿಲ್ಲಾ ಸಾಹಿತ್ಯ ಪರಿಷತ್ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಹುಬ್ಬಳ್ಳಿಯ ಹಿರಿಯ ವೃತ್ತಿ ರಂಗಭೂಮಿ ಕಲಾವಿದೆ ಶ್ರೀಮತಿ ಮಾಲತಿ ಕುಂದಾಪುರ ಅವರಿಗೆ ಪ್ರತಿಷ್ಠಿತ ‘ರಂಗ ಸ್ನೇಹಿತ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ವಿಜಯೀಂದ್ರ ಅರ್ಚಕ…

