ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಅರ್ಥಪೂರ್ಣ ಆಚರಣೆ

ನವಲಗುಂದ: ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ನೀಡಿದ ಕೊಡುಗೆಗಳು ಇಂದಿಗೂ ಪ್ರೇರಣೆಯಾಗಿವೆ ಎಂದು ನವಲಗುಂದ ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ ಹೇಳಿದರು. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು…

Read More

ಯಲಿವಾಳದಿಂದ ಕೂಬಿಹಾಳ ಕ್ರಾಸ್ ಬಳಿ ಮರಕ್ಕೆ ಎಸ್‌ವಿ ಜೆ ಶಾಲಾ ವಾಹನ ಡಿಕ್ಕಿ; ತಪ್ಪಿದ ಭಾರಿ ಅನಾಹುತ

ಹುಬ್ಬಳ್ಳಿ: ತಾಲ್ಲೂಕಿನ ಪಾಳಾ ಗ್ರಾಮದ ಎಸ್‌ವಿ ಜೆ ಶಾಲೆಗೆ ಸೇರಿದ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಮುಂಜಾನೆ ಸುಮಾರು 9.30ರ ವೇಳೆಗೆ ಕುಬಿಹಾಳದಿಂದ ಯಲಿವಾಳ ಕ್ರಾಸ್‌ ಕಡೆಗೆ ತೆರಳುತ್ತಿದ್ದಾಗ ನಡೆದಿದೆ. ಅಪಘಾತದ ಪರಿಣಾಮ ವಾಹನದ ಮುಂಭಾಗದ ಭಾಗ ಸ್ವಲ್ಪ ನಂಜು ಗುಂಜಾಗಿ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಾಹನ ಚಾಲನೆ ಮಾಡುವ ವೇಳೆ ಚಾಲಕ ಮೊಬೈಲ್‌ ಕರೆಯಲ್ಲಿ ಮಾತನಾಡುತ್ತಿದ್ದ ಎನ್ನುವ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ಚಾಲಕನ ನಿರ್ಲಕ್ಷ್ಯದಿಂದಲೇ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ…

Read More

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಿ: ಸಚಿವ ಸಂತೋಷ ಲಾಡ್

ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಪುಟ ದರ್ಜೆ ಸಚಿವ ಸಂತೋಷ ಎಸ್. ಲಾಡ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮೂರು ದಿನಗಳ ಕಾಲ ಜಿಲ್ಲೆಯ ಬರ ಪರಿಸ್ಥಿತಿ ಎದುರಿಸುತ್ತಿರುವ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದ್ದು, ಮೊದಲ ದಿನ…

Read More

ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ: ರೈತರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಿಸಿ, ಅಂಗನವಾಡಿ ಹಾಗೂ ರಸಗೊಬ್ಬರ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿ – ಸಚಿವ ಸಂತೋಷ ಲಾಡ್

ಧಾರವಾಡ: ರೈತರಿಗೆ ಸರ್ಕಾರದ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಅಂಗನವಾಡಿ ಕೇಂದ್ರಗಳು ಹಾಗೂ ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸಂಪುಟ ದರ್ಜೆ ಸಚಿವ ಸಂತೋಷ ಲಾಡ್ ಸೂಚಿಸಿದರು. ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನಡೆದ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರಿಗೆ ಬಿತ್ತನೆ ಬೀಜ ಹಾಗೂ…

Read More

ನವಲಗುಂದ ಶಾಸಕರ ವಿರುದ್ಧ ಲೋಕಾಯುಕ್ತ, ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ

ನವಲಗುಂದ: ಶಾಸಕರು ತಮ್ಮ ರಾಜಕೀಯ ಅಧಿಕಾರವನ್ನು ಬಳಸಿ ಕಾನೂನುಬಾಹಿರವಾಗಿ ಪೊಲೀಸ್ ಎಸ್ಕಾರ್ಟ್ ವಾಹನವನ್ನು ದುರ್ಬಳಕೆ ಮಾಡಿಕೊಂಡಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮಾಬುಸಾಬ ಯರಗುಪ್ಪಿ ಆಗ್ರಹಿಸಿದರು. ಬುಧವಾರ ತಹಶೀಲ್ದಾರ್ ಸುಧೀರ ಸಾಹುಕಾರ ಅವರ ಮೂಲಕ ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿ ಮಾತನಾಡಿದ ಅವರು, ಜನಪ್ರತಿನಿಧಿಯೊಬ್ಬರು ಸಾರ್ವಜನಿಕ ಹಣದಲ್ಲಿ ನಿರ್ವಹಣೆಯಾಗುವ ಪೊಲೀಸ್ ವ್ಯವಸ್ಥೆಯನ್ನು ಸ್ವಂತ ಹಿತಾಸಕ್ತಿಗೆ ಬಳಸಿಕೊಂಡಿರುವುದು…

Read More

ರಕ್ತದಾನ ಮಹಾದಾನ, ಸಮಾಜಮುಖಿ ಸೇವೆಯೇ ನಿಜವಾದ ಹುಟ್ಟುಹಬ್ಬದ ಆಚರಣೆ: ಪಂಚಗೃಹ ಹಿರೇಮಠದ ಇಮ್ಮಡಿ ಸಿದ್ದೇಶ್ವರ ಶ್ರೀ

ನವಲಗುಂದ: ರಕ್ತದಾನ ಮಹಾದಾನವಾಗಿದ್ದು, ರಕ್ತದಾನ ಮಾಡುವ ಪ್ರತಿಯೊಬ್ಬರೂ ಹಲವರ ಜೀವ ಉಳಿಸಲು ಕಾರಣರಾಗುತ್ತಾರೆ. ಇಂತಹ ಸೇವೆ ಅತ್ಯಂತ ಶ್ರೇಷ್ಠವಾದದ್ದು ಎಂದು ಪಂಚಗೃಹ ಹಿರೇಮಠದ ಇಮ್ಮಡಿ ಸಿದ್ದೇಶ್ವರ ಶ್ರೀಗಳು ಹೇಳಿದರು. ಶುಕ್ರವಾರ ಪಟ್ಟಣದ ಶ್ರೀ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ದೇವರಾಜ ದಾಡಿಬಾವಿ ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರ ಹಾಗೂ ಜನ್ಮದಿನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಹುಟ್ಟುಹಬ್ಬವನ್ನು ದುಂದುವೆಚ್ಚದಿಂದ ಆಚರಿಸುವ ಬದಲು ಸಮಾಜಕ್ಕೆ ಒಳಿತಾಗುವ ಸತ್ಕಾರ್ಯಗಳ ಮೂಲಕ…

Read More

ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 10 ಜನರಿಗೆ ಹೈಕೋರ್ಟ್ ಜಾಮೀನು, ಶಿಕ್ಷೆ ಅಮಾನತು

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 10 ಮಂದಿ ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯ ಆದೇಶಕ್ಕೆ ಉನ್ನತ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಹೈಕೋರ್ಟ್‌ನ ಈ ನಿರ್ಣಾಯಕ ಆದೇಶದಿಂದಾಗಿ ‘ದೋಷಿ’ ಎಂಬ ತೀರ್ಪಿಗೆ ತಡೆ ಬಿದ್ದಂತಾಗಿದ್ದು, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮರುಜೀವ ಸಿಕ್ಕಿದೆ. ಪ್ರಕರಣದ…

Read More

ಬರಗಾಲದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಅಧಿಕಾರಿಗಳಿಗೆ ಸೂಚನೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ

ಧಾರವಾಡ:ಬರಗಾಲದ ಪರಿಸ್ಥಿತಿ ಇರುವುದರಿಂದ ಸಾರ್ವಜನಿಕರಿಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಉತ್ತಮ ಸೇವೆ ಒದಗಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ತುಳಸಿ ಮದ್ದಿನೇನಿ ಅವರು ಸೂಚಿಸಿದರು. ಅವರು ಗುರುವಾರದಂದು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಜೂನ್ 2026ರ ಅಂತ್ಯದ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಆರೋಗ್ಯ ಇಲಾಖೆಯಿಂದ ನಡೆಯುತ್ತಿರುವ ಆರೋಗ್ಯ…

Read More

ಕುಂದಗೋಳ ಒಳಚರಂಡಿ ಯೋಜನೆಗೆ ₹96.60 ಕೋಟಿ ಅನುದಾನ ಮಂಜೂರಿಗೆ ನಗರಾಭಿವೃದ್ದಿ ಸಚಿವ ಯತ್ರಿಂದ್ರ ಸಿದ್ದರಾಮಯ್ಯನವರಿಗೆ ಮನವಿ

ಕುಂದಗೋಳ: ಕುಂದಗೋಳ ಪಟ್ಟಣದ ಬಹುನಿರೀಕ್ಷಿತ ಒಳಚರಂಡಿ ಯೋಜನೆಗೆ ₹96.60 ಕೋಟಿ (₹9,660 ಲಕ್ಷ) ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖಪ್ಪ ಎಸ್. ಶಿವಳ್ಳಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕುಂದಗೋಳ ಪಟ್ಟಣದ ಒಳಚರಂಡಿ ಯೋಜನೆಯ ಕಡತವನ್ನು ಮಾಜಿ ಸಚಿವ ದಿ. ಸಿ. ಎಸ್. ಶಿವಳ್ಳಿ ಅವರ ವಿಶೇಷ ಪರಿಶ್ರಮದಿಂದ ಸರ್ಕಾರದ ಸಚಿವಾಲಯದಲ್ಲಿ ಅಂತಿಮ ಹಂತದವರೆಗೆ ತಲುಪಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ…

Read More

ಧಾರವಾಡದಲ್ಲಿ ಜಾನಪದ ಉತ್ಸವ ಸಂಭ್ರಮ: ಗ್ರಾಮೀಣ ಜಾನಪದ ಕಲೆಗಳ ಉಳಿವಿಗೆ ಒತ್ತಾಯ

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಮರೆವಾಡ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಹಿಳಾ ಜಾನಪದ ಕಲಾ ಡೊಳ್ಳಿನ ಸಂಘದ ವತಿಯಿಂದ ಗ್ರಾಮೀಣ ಭಾಗದ ಜಾನಪದ ಕಲೆಗಳ ಸಂಭ್ರಮದ ಕಾರ್ಯಕ್ರಮ “ಜಾನಪದ ಉತ್ಸವ” ಧಾರವಾಡದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ಮರೆವಾಡ ಗ್ರಾಮದ ಪರಮಪೂಜ್ಯ ಶ್ರೀ ಶೇಖರಯ್ಯ ಹಿರೇಮಠ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮವನ್ನು ಕರ್ನಾಟಕ ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ತವನಪ್ಪ ಅಷ್ಟಗಿ ಅವರು ಡೊಳ್ಳು…

Read More