ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಸಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ
ಧಾರವಾಡ: ಜಿಲ್ಲೆಯಲ್ಲಿ ಬೇಸಿಗೆ ಅವಧಿ ಆರಂಭವಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ಹೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಸರ್ಕಾರದ ನಿಯಮದಂತೆ ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ ಕಡ್ಡಾಯವಾಗಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ನಡೆದ ಹೆಸ್ಕಾಂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕಲಘಟಗಿ, ಅಳ್ನಾವರ ಸೇರಿದಂತೆ ವಿವಿಧ…

