ಧಾರವಾಡ ಉದ್ಯೋಗ ಮೇಳ: 719 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ವಿತರಣೆ
ಧಾರವಾಡ: ನಗರದ ಕೆಸಿಡಿ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳವು ನಿರುದ್ಯೋಗಿ ಯುವಕ-ಯುವತಿಯರಿಂದ ಅಭೂತಪೂರ್ವ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಒಟ್ಟು 719 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಈ ಮೇಳದಲ್ಲಿ ಒಟ್ಟು 3,085 ಅಭ್ಯರ್ಥಿಗಳು ಪಾಲ್ಗೊಂಡು ತಮ್ಮ ಅದೃಷ್ಟ ಪರೀಕ್ಷಿಸಿಕೊಂಡರು. ಐಟಿ, ಉತ್ಪಾದನಾ ಕ್ಷೇತ್ರ, ಮಾರಾಟ, ಬ್ಯಾಂಕಿಂಗ್ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಒಟ್ಟು 122 ಖ್ಯಾತ ಕಂಪನಿಗಳು ಮೇಳದಲ್ಲಿ ಭಾಗವಹಿಸಿ ಅಭ್ಯರ್ಥಿಗಳ ನೇರ…

