ಜಿಲ್ಲಾ ಮಟ್ಟದ ಉದ್ಯೋಗ ಮೇಳ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
ಧಾರವಾಡ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು. ಇಂದು ಸಂಜೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಉದ್ಯೋಗ ಮೇಳದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರ್ಹತೆ ಇರುವ ಪ್ರತಿಯೊಬ್ಬ ಉದ್ಯೋಗ ಆಕಾಂಕ್ಷಿಗೂ…

