ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಭಯಮುಕ್ತರಾಗಿ ಪರೀಕ್ಷೆ ಎದುರಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕಿವಿಮಾತು
ಧಾರವಾಡ: “ವಿದ್ಯಾರ್ಥಿಗಳು ಪರೀಕ್ಷಾ ಒತ್ತಡಕ್ಕೆ ಒಳಗಾಗದೆ, ಆತ್ಮವಿಶ್ವಾಸದಿಂದ ಮತ್ತು ಭಯಮುಕ್ತರಾಗಿ ಪರೀಕ್ಷೆಯನ್ನು ಎದುರಿಸಬೇಕು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಇಂದು (ಫೆ.16) ಆಯೋಜಿಸಲಾಗಿದ್ದ ‘ಜ್ಞಾನ ಸಿಂಚನ’ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಉತ್ತಮ ಅಂಕ ಗಳಿಸಲು ಹೇಗೆ ವ್ಯವಸ್ಥಿತವಾಗಿ ಅಧ್ಯಯನ ಮಾಡಬೇಕು ಎಂಬುದರ ಕುರಿತು ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು. ತಜ್ಞರಿಂದ ಸಮಸ್ಯೆಗಳಿಗೆ…

