ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ
ಧಾರವಾಡ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಸ್ನೇಹಲ್ ಆರ್. ಅವರು ಬುಧವಾರ (ಫೆಬ್ರವರಿ 11) ಅಧಿಕಾರ ವಹಿಸಿಕೊಂಡರು. ಈ ಹಿಂದೆ ಧಾರವಾಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದ ಇವರು, ಇದೀಗ ಜಿಲ್ಲೆಯ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕರಾಗಿದ್ದ ಸ್ನೇಹಲ್ ಆರ್. ಅವರನ್ನು ಸರ್ಕಾರವು ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ….

