ಧಾರವಾಡ: ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾ ಪಂಚಾಯತ್ ಸಹಾಯವಾಣಿ ಆರಂಭ
ಧಾರವಾಡ ಮಾ.11: ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಕಾಲದ ಹಿನ್ನಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮವಹಿಸಲು ಮತ್ತು ಕಚೇರಿಗೆ ಸ್ವೀಕೃತವಾಗುವ ದೂರಗಳನ್ನು ಇತ್ಯರ್ಥಗೊಳಿಸಲು ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತದಲ್ಲಿ ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಕ್ಕೆ 0836-2742221 ಗೆ ಸಾರ್ವಜನಿಕರು ಕರೆ ಮಾಡಿ ಸಂಪರ್ಕಿಸಬಹುದು. ಧಾರವಾಡ ಜಿಲ್ಲಾ ಪಂಚಾಯತ ಕಚೇರಿಗೆ…

