ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ನವಲಗುಂದದಲ್ಲಿ ಅಕ್ಷರ ದಾಸೋಹ ನೌಕರರಿಂದ ಮನವಿ ಸಲ್ಲಿಕೆ
ನವಲಗುಂದ: ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರಾಧಾ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಬಿಸಿಯೂಟ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಈ ಮನವಿ ಸಲ್ಲಿಸಲಾಗಿದ್ದು, ಹಲವು ವರ್ಷಗಳಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಆಗ್ರಹಿಸಿದರು. ಒಂದು ವೇಳೆ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ, ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಗೆ ಓಗೊಟ್ಟು ಫೆಬ್ರವರಿ…

