ಶಿರೂರ ಹಾಲು ಉತ್ಪಾದಕ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ: ಅಭಿವೃದ್ಧಿಗೆ ಶ್ರಮಿಸಲು ಅಶೋಕ ಘೋರ್ಪಡೆ ಕರೆ
ಕುಂದಗೋಳ: ತಾಲೂಕಿನ ಶಿರೂರ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕ ಘೋರ್ಪಡೆ ಅವರು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ನಿರಂತರವಾಗಿ ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಂಡು, ಹೈನುಗಾರಿಕೆ ಮಾಡುವ ರೈತರು ಹಾಗೂ ಮಹಿಳೆಯರಿಗೆ ಆರ್ಥಿಕ ಉತ್ತೇಜನ ನೀಡುತ್ತಾ ಬಂದಿರುವ ಸಂಘದ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಏಳಿಗೆಯಲ್ಲಿ ಪದಾಧಿಕಾರಿಗಳ ಶ್ರಮ ಮಹತ್ವದ್ದಾಗಿದ್ದು,…

