ನವಲಗುಂದ: ಉಚಿತ ಬ್ಯಾಂಕಿಂಗ್, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಜ.18 ಅರ್ಜಿ ಸಲ್ಲಿಕೆ ಕೊನೆಯ ದಿನ
ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗಾಗಿ ಉಚಿತ ಬ್ಯಾಂಕಿಂಗ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಶಾಂಭವಿ ವಿನೋದ ಅಸೂಟಿ ಟ್ರಸ್ಟ್ ನವಲಗುಂದ ಹಾಗೂ ಧಾರವಾಡದ ಟ್ರ್ಯಾಕ್ ಇಟ್ ಅಕಾಡೆಮಿ (Track It Academy) ಸಹಯೋಗದೊಂದಿಗೆ ಈ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಬ್ಯಾಂಕಿಂಗ್, ಎಸ್.ಎಸ್.ಸಿ (SSC), ಅಗ್ನಿವೀರ್ ಹಾಗೂ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ….

