​ಮಹದಾಯಿ ಯೋಜನೆ ಜಾರಿಯಲ್ಲಿ ಯಾವುದೇ ನಿರ್ಲಕ್ಷ್ಯವಿಲ್ಲ; ಸಿಬಿಲ್ ಸ್ಕೋರ್ ನೋಡಿ ಸಾಲ ನಿರಾಕರಿಸಿದರೆ ಶಿಸ್ತುಕ್ರಮ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ನವಲಗುಂದ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಕಾಮಗಾರಿ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ಪಟ್ಟಣದ ಮಾಡೆಲ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಸದರ ಕ್ರೀಡಾ ಮಹೋತ್ಸವಕ್ಕೆ ಆಗಮಿಸಿದ್ದ ವೇಳೆ ರೈತಭವನಕ್ಕೆ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು. ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಪರಿಸರ ಇಲಾಖೆಯ ಅನುಮತಿ ಮತ್ತು ಗೆಜೆಟ್ ನೋಟಿಫಿಕೇಶನ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಆದರೆ, ಅರಣ್ಯ ಇಲಾಖೆಗೆ ಸಂಬಂಧಿಸಿದ ಗಿಡಗಳನ್ನು ತೆರವುಗೊಳಿಸಿದಾಗ ಪರ್ಯಾಯವಾಗಿ…

Read More

ಮತದಾರರ ಪಟ್ಟಿ ಪರಿಷ್ಕರಣೆ ಇಲ್ಲ; ಕೇವಲ ‘ಮ್ಯಾಪಿಂಗ್‌’ ಕಾರ್ಯ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ಪಷ್ಟನೆ

ಧಾರವಾಡ: ಜಿಲ್ಲೆಯಲ್ಲಿ ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ನಡೆಯುತ್ತಿಲ್ಲ. ಹೀಗಾಗಿ, ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ತೆಗೆದುಹಾಕುವ ಅಥವಾ ಹೊಸದಾಗಿ ಸೇರ್ಪಡೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿಲ್ಲ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ಪಷ್ಟಪಡಿಸಿದ್ದಾರೆ. ​ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಭಾನುವಾರ (ಜ.12) ಸಂಜೆ ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ, ಮುಂಬರುವ…

Read More

ಹಿರೇಮಠದ ಶ್ರೀಗಳ ವಿರುದ್ಧ ಅಪಪ್ರಚಾರ ಖಂಡಿಸಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ

ನವಲಗುಂದ: ಪಟ್ಟಣದ ಇತಿಹಾಸ ಪ್ರಸಿದ್ಧ ಪಂಚಗ್ರಹ ಹಿರೇಮಠದ ಪೀಠಾಧ್ಯಕ್ಷರಾದ ಚ.ಬ್ರ.ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ತೇಜೋವಧೆಯನ್ನು ಖಂಡಿಸಿ, ಮಂಗಳವಾರ (ಜ.13) ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಸದ್ಭಕ್ತ ಮಂಡಳಿ ತಿಳಿಸಿದೆ. ​ಕೆಲವು ವ್ಯಕ್ತಿಗಳು ಶ್ರೀ ಮಠದ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದ್ದು, ಇದರಿಂದ ತಾಲೂಕಿನ ಭಕ್ತ ಸಮೂಹಕ್ಕೆ ಮಾನಸಿಕವಾಗಿ ನೋವುಂಟಾಗಿದೆ. ಈ ಹಿನ್ನೆಲೆಯಲ್ಲಿ ಜ.10ರಂದು ನಡೆದ ಭಕ್ತರ ಸಭೆಯಲ್ಲಿ…

Read More

ಪಾಲಿಕೆ ಉದ್ಯಾನವನ ನಿರ್ವಹಣೆಗೆ ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಉದ್ಯಾನವನಗಳು ಹಾಗೂ ಆಟದ ಮೈದಾನಗಳ ನಿರ್ವಹಣೆ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಡೇ-ನಲ್ಮ್ (DAY-NULM) ಅಭಿಯಾನದಡಿ ಅರ್ಹ ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ​ಕೇಂದ್ರ ಸರ್ಕಾರ ಪುರಸ್ಕೃತ ಅಮೃತ್-2.0 ಅಭಿಯಾನದ ‘ಅಮೃತ್ ಮಿತ್ರ’ ಹಂತ-2 ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆಗಳ ಅಡಿಯಲ್ಲಿ ಈ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಡೇ-ನಲ್ಮ್ ಅಭಿಯಾನದಡಿ ರಚನೆಯಾಗಿರುವ ಆಸಕ್ತ ಮಹಿಳಾ ಸ್ವ-ಸಹಾಯ ಗುಂಪುಗಳು ಈ ಯೋಜನೆಯಡಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ​ಆಸಕ್ತ ಮಹಿಳಾ ಸ್ವ-ಸಹಾಯ…

Read More

ಗಣರಾಜ್ಯೋತ್ಸವ: ಸಂವಿಧಾನದ ಆಶಯ ಸಾರುವ ಅರ್ಥಪೂರ್ಣ ಆಚರಣೆಗೆ ಸಜ್ಜಾಗಿ- ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಇದೇ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವವು ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗಬಾರದು. ಸಂವಿಧಾನದ ಆಶಯಗಳನ್ನು ಸಾರುವ ನಿಟ್ಟಿನಲ್ಲಿ ಅಚ್ಚುಕಟ್ಟಾದ ಹಾಗೂ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ಸಜ್ಜಾಗಬೇಕಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ​ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಬ್ಬವಾಗಿರುವ ಗಣರಾಜ್ಯೋತ್ಸವದಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು. ಪೊಲೀಸ್, ಶಿಕ್ಷಣ ಸೇರಿದಂತೆ ವಿವಿಧ…

Read More

ಜ. 21ರಂದು ಅನುಪಯುಕ್ತ ಸಾಮಗ್ರಿಗಳ ಮರು ಹರಾಜು: ಹೆಸರು ನೋಂದಣಿಗೆ ಆಹ್ವಾನ

ಧಾರವಾಡ: ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತರಬೇತಿ ಕೇಂದ್ರ ಹಾಗೂ ಪಶು ಆಸ್ಪತ್ರೆ ಕಚೇರಿಯಲ್ಲಿರುವ ಅನುಪಯುಕ್ತ ಸಾಮಗ್ರಿಗಳ ಮರು ಹರಾಜು ಪ್ರಕ್ರಿಯೆಯನ್ನು ಜನವರಿ 21, 2026ರಂದು ಬೆಳಿಗ್ಗೆ 10:30ಕ್ಕೆ ಏರ್ಪಡಿಸಲಾಗಿದೆ. ​ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ಹಾಗೂ ಆಸಕ್ತರು ಕಚೇರಿಗೆ ಖುದ್ದು ಭೇಟಿ ನೀಡಿ ಸಾಮಗ್ರಿಗಳನ್ನು ಪರಿಶೀಲಿಸಬಹುದಾಗಿದೆ. ಆಸಕ್ತರು ಜನವರಿ 19, 2026ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಬಿಡ್‌ಗೆ ಸಂಬಂಧಿಸಿದ ಠೇವಣಿ ಮೊತ್ತವನ್ನು ಭರಣ ಮಾಡುವ ಮೂಲಕ ಹರಾಜಿನಲ್ಲಿ ಭಾಗವಹಿಸಬೇಕು ಎಂದು ಪಶುಪಾಲನಾ…

Read More

​ಧಾರವಾಡದ ಸಮಗ್ರ ಅಭಿವೃದ್ಧಿಗೆ 3000 ಕೋಟಿ ಅನುದಾನಕ್ಕೆ ಆಗ್ರಹ: ಬೃಹತ್ ಸಹಿ ಸಂಗ್ರಹ ಅಭಿಯಾನ

ಧಾರವಾಡ:ಮುಂಬರುವ 2026-27ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಧಾರವಾಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 3000 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮೀಸಲಿಡಬೇಕು ಎಂದು ಆಗ್ರಹಿಸಿ ಜಿಲ್ಲೆಯಲ್ಲಿ ಬೃಹತ್ ಸಹಿ ಸಂಗ್ರಹಣಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ​ಜನತಾದಳ (ಸಂಯುಕ್ತ) ಪಕ್ಷದ ನೇತೃತ್ವದಲ್ಲಿ ನಡೆದ ಈ ಅಭಿಯಾನದ ಮೂಲಕ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಇದಕ್ಕೂ ಮುನ್ನ, ಕಳೆದ ಡಿಸೆಂಬರ್ 26, 2025 ರಂದು ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಕುರಿತು ಅಧಿಕೃತ ಮನವಿಯನ್ನು ಸಲ್ಲಿಸಲಾಗಿತ್ತು. ಧಾರವಾಡ ನಗರದ…

Read More

ನವಲಗುಂದದಲ್ಲಿ ಗಡಗಡ ನಡುಗಿಸುವ ಚಳಿ: ಹೈರಾಣಾದ ಜನತೆ, ಜಾನುವಾರು ಮತ್ತು ಬೆಳೆಗಳಿಗೂ ಶೀತ ಸಂಕಷ್ಟ!

ವರದಿ: ಸಂಜಯ ಸಿ. ಗುರಿಕಾರ ನವಲಗುಂದ: ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಮೈಕೊರೆಯುವ ಚಳಿ ಹಾಗೂ ಶೀತಗಾಳಿಯ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾತ್ರಿ ಹಾಗೂ ಬೆಳಗಿನ ಜಾವ ಆವರಿಸಿಕೊಳ್ಳುತ್ತಿರುವ ವಿಪರೀತ ಚಳಿಯಿಂದಾಗಿ ಜನ, ಜಾನುವಾರು ಮಾತ್ರವಲ್ಲದೆ ಕೃಷಿ ಬೆಳೆಗಳೂ ಸಂಕಷ್ಟಕ್ಕೆ ಸಿಲುಕಿವೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಮಾಗಿ ಚಳಿಗೆ ಶೀತಗಾಳಿ ಸೇರಿರುವುದರಿಂದ ಜನರು ಹೈರಾಣಾಗಿದ್ದಾರೆ. ಮುಂಜಾನೆ ವೇಳೆ ಐಸ್ ಟ್ಯೂಬ್‌ನಲ್ಲಿ ಕುಳಿತಂತಹ ಅನುಭವವಾಗುತ್ತಿದೆ ಎಂದು ಸ್ಥಳೀಯರು…

Read More

ನವಲಗುಂದ:ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ಲಿಂಗರಾಜ ಸರದೇಶಾಯಿಯವರ ಕೊಡುಗೆ ಅಪಾರ

ನವಲಗುಂದ: ತಮ್ಮ ಸಮಸ್ತ ಆಸ್ತಿಯನ್ನು ಶಿಕ್ಷಣ ಮತ್ತು ಕೃಷಿ ಅಭಿವೃದ್ಧಿಗೆ ದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮ ಬದುಕನ್ನೇ ಸಮರ್ಪಿಸಿದ ಮಹಾನ್ ಚೇತನ ಶ್ರೀ ಲಿಂಗರಾಜ ಸರದೇಶಾಯಿಯವರು ಸದಾಕಾಲ ಸ್ಮರಣೀಯ ಹಾಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ಅವರ ವಂಶಸ್ಥರಾದ ಲಿಂಗರಾಜ ಸರದೇಶಾಯಿ ಅವರು ಹೇಳಿದರು. ​ನಗರದ ಥಡಿಮಠದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶ್ರೀ ಲಿಂಗರಾಜ ಸರದೇಶಾಯಿ ಅವರ 165ನೇ ಜನ್ಮದಿನಾಚರಣೆ ಅಂಗವಾಗಿ ಲಿಂಗರಾಜರ ಗದ್ದುಗೆಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. 19ನೇ ಶತಮಾನದಲ್ಲೇ ಸಮಾಜವನ್ನು ಎಚ್ಚರಿಸಿ ಶಿಕ್ಷಣದ ಜ್ಯೋತಿ…

Read More

ಚಿಕ್ಕಹರಕುಣಿ ಬಸ್ಸ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು

ಕುಂದಗೋಳ: ತಾಲ್ಲೂಕಿನ ಕಮಡೊಳ್ಳಿ ಮತ್ತು ಚಿಕ್ಕಹರಕುಣಿ ಗ್ರಾಮಗಳ ಮಧ್ಯೆ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಜಗದೀಶ್ ತಳವಾರ್ (47) ಮೃತಪಟ್ಟಿದ್ದಾರೆ. ಶುಕ್ರವಾರದಂದು ಕಮಡೊಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಜಗದೀಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ…

Read More